ಧರ್ಮೋಪದೇಶಕಾಂಡ 29:21

ಈ ನ್ಯಾಯಪ್ರಮಾಣದ ಪುಸ್ತಕ ದಲ್ಲಿ ಬರೆದಿರುವ ಒಡಂಬಡಿಕೆಯ ಎಲ್ಲಾ ಶಾಪಗಳ ಪ್ರಕಾರ ಕರ್ತನು ಅವನನ್ನು ಇಸ್ರಾಯೇಲಿನ ಎಲ್ಲಾ ಗೋತ್ರಗಳೊಳಗಿಂದ ಕೇಡಿಗೆ ಪ್ರತ್ಯೇಕಿಸುವನು.

ಸಂದರ್ಭದೊಂದಿಗೆ ಓದಿ · ಧರ್ಮೋಪದೇಶಕಾಂಡ 29

19ಈ ಶಾಪದ ಮಾತುಗಳನ್ನು ಕೇಳಿ ಅವನು--ನನ್ನ ಹೃದಯದ ಕಲ್ಪನೆ ಯಲ್ಲಿ ನಡೆದುಕೊಂಡು ದಾಹಕ್ಕೆ ಅಮಲನ್ನು ಕುಡಿಸಿ ದರೂ ನನಗೆ ಸಮಾಧಾನವಿರುವದೆಂದು ಹೇಳಿಕೊಂಡು ತನ್ನ ಹೃದಯದಲ್ಲಿ ತನ್ನನ್ನು ಆಶೀರ್ವದಿಸಿಕೊಳ್ಳುವವ ನಾದರೆ

20ಅಂಥವನನ್ನು ಕರ್ತನು ಉಳಿಸುವದಿಲ್ಲ; ಆಗಲೇ ಕರ್ತನ ಕೋಪವೂ ರೋಷವೂ ಆ ಮನುಷ್ಯನ ಮೇಲೆ ಹೊಗೆ ಹಾಯುವವು. ಈ ಪುಸ್ತಕದಲ್ಲಿ ಬರೆದಿ ರುವ ಶಾಪವೆಲ್ಲಾ ಅವನ ಮೇಲೆ ನೆಲೆಯಾಗುವದು; ಕರ್ತನು ಅವನ ಹೆಸರನ್ನು ಆಕಾಶದ ಕೆಳಗಿನಿಂದ ಅಳಿಸಿಬಿಡುವನು.

21ಈ ನ್ಯಾಯಪ್ರಮಾಣದ ಪುಸ್ತಕ ದಲ್ಲಿ ಬರೆದಿರುವ ಒಡಂಬಡಿಕೆಯ ಎಲ್ಲಾ ಶಾಪಗಳ ಪ್ರಕಾರ ಕರ್ತನು ಅವನನ್ನು ಇಸ್ರಾಯೇಲಿನ ಎಲ್ಲಾ ಗೋತ್ರಗಳೊಳಗಿಂದ ಕೇಡಿಗೆ ಪ್ರತ್ಯೇಕಿಸುವನು.

22ಹೀಗೆ ನಿಮ್ಮ ತರುವಾಯ ಹುಟ್ಟುವ ನಿಮ್ಮ ಮಕ್ಕಳ ಮುಂದಿನ ಸಂತತಿಯೂ ದೂರ ದೇಶದಿಂದ ಬರುವ ಅನ್ಯನೂ ಆ ದೇಶದ ಬಾಧೆಗಳನ್ನೂ ಕರ್ತನು ಅದರಲ್ಲಿ ಬರಮಾಡಿದ ರೋಗಗಳನ್ನೂ ನೋಡಿ

23ಕರ್ತನು ತನ್ನ ಕೋಪದಲ್ಲಿಯೂ ರೌದ್ರದಲ್ಲಿಯೂ ಕೆಡವಿ ಹಾಕಿದ ಸೊದೋಮ್‌ ಗೊಮೋರ ಅದ್ಮಾಚೆಬೋ ಯಾಮ್‌ ಇವುಗಳ ಹಾಗೆ ಆ ದೇಶವೆಲ್ಲಾ ಗಂಧಕವೂ ಉಪ್ಪೂ ಉರಿಯುತ್ತಾ ಬಿತ್ತಲ್ಪಡದೆ ಮೊಳೆಯದೆ ಯಾವ ಹುಲ್ಲನ್ನಾದರೂ ಬೆಳೆಸದೆ ಇರುವದನ್ನು ನೋಡಿ--

ಧರ್ಮೋಪದೇಶಕಾಂಡ 29 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी