ಅವನು ಪ್ರತಿ ಸಬ್ಬತ್ ದಿನವೂ ಸಭಾಮಂದಿರದಲ್ಲಿ ಚರ್ಚಿಸಿ ಯೆಹೂದ್ಯರನ್ನೂ ಗ್ರೀಕರನ್ನೂ ಒಡಂಬಡಿಸುತ್ತಿದ್ದನು.
2ಪೊಂತದಲ್ಲಿ ಹುಟ್ಟಿದ ಅಕ್ವಿಲನೆಂಬ ಒಬ್ಬ ಯೆಹೂದ್ಯ ನನ್ನು ಅಲ್ಲಿ ಕಂಡನು. (ಯೆಹೂದ್ಯರೆಲ್ಲರೂ ರೋಮಾ ಪುರವನ್ನು ಬಿಟ್ಟು ಹೋಗಬೇಕೆಂದು ಕ್ಲೌದ್ಯನು ಆಜ್ಞೆ ವಿಧಿಸಿದ್ದನು). ಆದಕಾರಣ ಅಕ್ವಿಲನೂ ಅವನ ಹೆಂಡತಿಯಾದ ಪ್ರಿಸ್ಕಿಲ್ಲಳೂ ಕೆಲವು ದಿವಸಗಳ ಮುಂಚೆ ಇತಾಲ್ಯದಿಂದ ಅಲ್ಲಿಗೆ ಬಂದಿದ್ದರು; ಪೌಲನು ಅವರ
3ಅವರು ತಮ್ಮ ವೃತ್ತಿಯಿಂದ ಗುಡಾರ ಮಾಡುವವರಾಗಿದ್ದದರಿಂದ ಅವನು ಅವ ರೊಂದಿಗೆ ಇದ್ದು ಕೆಲಸ ಮಾಡುತ್ತಿದ್ದನು ಯಾಕಂದರೆ ಅವನೂ ಅದೇ ಕಸಬಿನವನಾಗಿದ್ದನು.
4ಅವನು ಪ್ರತಿ ಸಬ್ಬತ್ ದಿನವೂ ಸಭಾಮಂದಿರದಲ್ಲಿ ಚರ್ಚಿಸಿ ಯೆಹೂದ್ಯರನ್ನೂ ಗ್ರೀಕರನ್ನೂ ಒಡಂಬಡಿಸುತ್ತಿದ್ದನು.
5ಸೀಲ ತಿಮೊಥೆಯರು ಮಕೆದೋನ್ಯದಿಂದ ಬಂದಾಗ ಪೌಲನು ಆತ್ಮದಲ್ಲಿ ಒತ್ತಾಯ ಮಾಡಲ್ಪಟ್ಟು ಯೇಸುವೇ ಕ್ರಿಸ್ತನೆಂದು ಯೆಹೂದ್ಯರಿಗೆ ಸಾಕ್ಷಿಕೊಟ್ಟನು.
6ಅವರು ಎದುರಿಸಿ ದೇವದೂಷಣೆ ಮಾಡಲಾಗಿ ಅವನು ತನ್ನ ವಸ್ತ್ರವನ್ನು ಝಾಡಿಸಿ ಅವರಿಗೆ--ನಿಮ್ಮ ರಕ್ತವು ನಿಮ್ಮ ತಲೆಗಳ ಮೇಲೆ ಇರಲಿ; ನಾನು ಇಂದಿನಿಂದ ದೋಷರಹಿತನಾಗಿ ಅನ್ಯಜನರ ಬಳಿಗೆ ಹೋಗುತ್ತೇನೆ ಎಂದು ಹೇಳಿ
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ