ಹೋಶೇ 9:4

ಅವರು ದ್ರಾಕ್ಷಾರಸ ವನ್ನು ಕಾಣಿಕೆಯಾಗಿ ಕರ್ತನಿಗೆ ಅರ್ಪಿಸುವದಿಲ್ಲ, ಇಲ್ಲವೆ ಅವರು ಆತನಿಗೆ ಮೆಚ್ಚಿಕೆಯಾಗಿರುವದಿಲ್ಲ; ಅವರ ಬಲಿಗಳು ಅವರಿಗೆ ದುಃಖಿಸುವವರ ರೊಟ್ಟಿಯ ಹಾಗಿ ರುವವು; ಅದನ್ನು ತಿನ್ನುವವರೆಲ್ಲರೂ ಅಪವಿತ್ರ ರಾಗುವರು. ಅವರ ಪ್ರಾಣಕ್ಕಾಗಿರುವ ಅವರ ರೊಟ್ಟಿಯು ಕರ್ತನ ಆಲಯಕ್ಕೆ ಬರುವದಿಲ್ಲ.

ಸಂದರ್ಭದೊಂದಿಗೆ ಓದಿ · ಹೋಶೇ 9

2ಕಣವು ಮತ್ತು ದ್ರಾಕ್ಷೆಯ ತೋಟವು ಅವರನ್ನು ಪೋಷಿಸುವದಿಲ್ಲ; ಹೊಸ ದ್ರಾಕ್ಷಾರಸವು ಅವಳಲ್ಲಿ ನಿಂತುಹೋಗುವದು.

3ಅವರು ಕರ್ತನ ದೇಶದಲ್ಲಿ ನೆಲೆಸುವದಿಲ್ಲ; ಆದರೆ ಎಫ್ರಾಯಾಮು ಐಗುಪ್ತಕ್ಕೆ ತಿರುಗುವದು; ಅವರು ಅಶ್ಯೂರಿನಲ್ಲಿ ಅಶುದ್ಧ ವಾದವುಗಳನ್ನು ತಿನ್ನುವರು.

4ಅವರು ದ್ರಾಕ್ಷಾರಸ ವನ್ನು ಕಾಣಿಕೆಯಾಗಿ ಕರ್ತನಿಗೆ ಅರ್ಪಿಸುವದಿಲ್ಲ, ಇಲ್ಲವೆ ಅವರು ಆತನಿಗೆ ಮೆಚ್ಚಿಕೆಯಾಗಿರುವದಿಲ್ಲ; ಅವರ ಬಲಿಗಳು ಅವರಿಗೆ ದುಃಖಿಸುವವರ ರೊಟ್ಟಿಯ ಹಾಗಿ ರುವವು; ಅದನ್ನು ತಿನ್ನುವವರೆಲ್ಲರೂ ಅಪವಿತ್ರ ರಾಗುವರು. ಅವರ ಪ್ರಾಣಕ್ಕಾಗಿರುವ ಅವರ ರೊಟ್ಟಿಯು ಕರ್ತನ ಆಲಯಕ್ಕೆ ಬರುವದಿಲ್ಲ.

5ಪರಿಶುದ್ಧದಿನದ ಲ್ಲಿಯೂ ಕರ್ತನ ಹಬ್ಬದ ದಿನದಲ್ಲಿಯೂ ನೀವು ಏನು ಮಾಡುತ್ತೀರಿ?

6ಅವರು ಹಾಳಾದ ದೇಶವನ್ನು ಬಿಟ್ಟು ಹೋಗುವರು; ಐಗುಪ್ತವು ಅವರನ್ನು ಕೂಡಿಸುವದು, ಮೋಫ್‌ ಪಟ್ಟಣವು ಅವರನ್ನು ಹೂಣುವದು; ಅಪೇಕ್ಷಿ ಸಲ್ಪಟ್ಟ ಅವರ ಬೆಳ್ಳಿಯ ಒಡವೆಗಳು ದಬ್ಬೆಗಳ್ಳಿಗಳ ಪಾಲಾಗುವವು. ತುರುಚಿಯ ಗಿಡಗಳು ಅವರನ್ನು ಆವರಿಸಿಕೊಂಡಿವೆ; ಮುಳ್ಳುಗಳು ಅವರ ಗುಡಾರಗಳಲ್ಲಿ ಇರುವವು.

ಹೋಶೇ 9 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी