ಧರ್ಮೋಪದೇಶಕಾಂಡ 11:18

ಆದದರಿಂದ ಈ ನನ್ನ ವಾಕ್ಯಗಳನ್ನು ನಿಮ್ಮ ಹೃದಯದಲ್ಲಿಯೂ ಮನಸ್ಸಿನಲ್ಲಿಯೂ ಇಟ್ಟುಕೊಳ್ಳಿರಿ; ಅವುಗಳನ್ನು ಗುರುತಾಗಿ ನಿಮ್ಮ ಕೈಗಳಿಗೆ ಕಟ್ಟಿಕೊಳ್ಳಿರಿ; ಅವು ನಿಮ್ಮ ಕಣ್ಣುಗಳ ನಡುವೆ ಹಣೆಕಟ್ಟಾಗಿರಲಿ.

ಸಂದರ್ಭದೊಂದಿಗೆ ಓದಿ · ಧರ್ಮೋಪದೇಶಕಾಂಡ 11

16ನಿಮ್ಮ ಹೃದಯವು ಮರುಳುಗೊಳ್ಳದ ಹಾಗೆಯೂ ನೀವು ಓರೆಯಾಗಿ ಹೋಗಿ ಬೇರೆ ದೇವರುಗಳನ್ನು ಸೇವಿಸಿ ಅಡ್ಡಬೀಳದ ಹಾಗೆಯೂ

17ಕರ್ತನ ಕೋಪವು ನಿಮ್ಮ ಮೇಲೆ ಉರಿಯಲು ಆತನು ಮಳೆಯಾಗದಂತೆ ಮಾಡಿ ಭೂಮಿಯು ತನ್ನ ಬೆಳೆಯನ್ನು ಕೊಡದಂತೆ ಆಕಾಶವನ್ನು ಮುಚ್ಚಿಬಿಡದ ಹಾಗೆಯೂ ಕರ್ತನು ನಮಗೆ ಕೊಡುವ ಆ ಉತ್ತಮ ದೇಶದಲ್ಲಿಂದ ನೀವು ಬೇಗ ನಾಶವಾಗದ ಹಾಗೆಯೂ ಎಚ್ಚರಿಕೆ ತಂದುಕೊಳ್ಳಿರಿ.

18ಆದದರಿಂದ ಈ ನನ್ನ ವಾಕ್ಯಗಳನ್ನು ನಿಮ್ಮ ಹೃದಯದಲ್ಲಿಯೂ ಮನಸ್ಸಿನಲ್ಲಿಯೂ ಇಟ್ಟುಕೊಳ್ಳಿರಿ; ಅವುಗಳನ್ನು ಗುರುತಾಗಿ ನಿಮ್ಮ ಕೈಗಳಿಗೆ ಕಟ್ಟಿಕೊಳ್ಳಿರಿ; ಅವು ನಿಮ್ಮ ಕಣ್ಣುಗಳ ನಡುವೆ ಹಣೆಕಟ್ಟಾಗಿರಲಿ.

19ನಿಮ್ಮ ಮನೆಯಲ್ಲಿ ಕೂತಿರುವಾಗಲೂ ಮಾರ್ಗದಲ್ಲಿ ನಡೆಯುವಾಗಲೂ ಮಲಗುವಾಗಲೂ ಏಳುವಾಗಲೂ ಅವುಗಳ ವಿಷಯ ಮಾತನಾಡಿ ಅವುಗಳನ್ನು ನಿಮ್ಮ ಮಕ್ಕಳಿಗೆ ಕಲಿಸಬೇಕು.

20ನಿನ್ನ ಮನೆಯ ಕಂಬಗಳ ಮೇಲೆಯೂ ನಿನ್ನ ಬಾಗಲುಗಳ ಮೇಲೆಯೂ ಅವು ಗಳನ್ನು ಬರೆಯಬೇಕು.

ಧರ್ಮೋಪದೇಶಕಾಂಡ 11 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी