ಕರ್ತನ ಕೋಪವು ಅವರ ಮೇಲೆ ಉರಿಯಿತು, ಆತನು ಹೋದನು.
7ನನ್ನ ಸೇವಕನಾದ ಮೋಶೆಯು ಹಾಗಲ್ಲ; ಅವನು ನನ್ನ ಮನೆಯಲ್ಲೆಲ್ಲಾ ನಂಬಿಗಸ್ತನಾ ಗಿದ್ದಾನೆ.
8ಗೂಢವಾಗಿ ಅಲ್ಲ, ಮುಖಾಮುಖಿಯಾಗಿ ಅಂದರೆ ಪ್ರತ್ಯಕ್ಷವಾಗಿ ನಾನು ಅವನ ಸಂಗಡ ಮಾತನಾ ಡುತ್ತೇನೆ. ಅವನು ಕರ್ತನ ರೂಪವನ್ನು ನೋಡುತ್ತಾನೆ; ಹೀಗಿರಲು ನೀವು ನನ್ನ ಸೇವಕನಾದ ಮೋಶೆಗೆ ವಿರೋಧವಾಗಿ ಮಾತನಾಡಲು ಯಾಕೆ ಭಯಪಡಲಿಲ್ಲ ಎಂದು ಹೇಳಿದನು.
9ಕರ್ತನ ಕೋಪವು ಅವರ ಮೇಲೆ ಉರಿಯಿತು, ಆತನು ಹೋದನು.
10ಆ ಮೇಘವು ಗುಡಾರದ ಮೇಲಿನಿಂದ ತೊಲಗಿ ಹೋಯಿತು; ಆಗ ಇಗೋ, ಮಿರ್ಯಾಮಳು ಹಿಮದ ಹಾಗೆ ಕುಷ್ಠವುಳ್ಳವಳಾದಳು. ಆರೋನನು ಮಿರ್ಯಾಮಳ ಕಡೆಗೆ ನೋಡಿದಾಗ ಇಗೋ, ಅವಳು ಕುಷ್ಠರೋಗಿ ಯಾಗಿದ್ದಳು.
11ಆರೋನನು ಮೋಶೆಗೆ--ಅಯ್ಯೋ, ನನ್ನ ಒಡೆಯನೇ, ನಾವು ಪಾಪಮಾಡಿದೆವು, ಬುದ್ಧಿಯಿಲ್ಲದೆ ಮಾಡಿದ ಈ ಪಾಪವನ್ನು ನಮ್ಮ ಮೇಲೆ ಹಾಕಬೇಡ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ