ಹೀಗೆ ಪ್ರವಾದಿಯಾದ ಯೆಶಾಯನಿಂದ ಹೇಳಲ್ಪಟ್ಟಿದ್ದು ನೆರವೇರಿತು; ಅದೇನಂದರೆ--
15ಆದರೆ ಯೇಸು ಅದನ್ನು ತಿಳಿದು ಅಲ್ಲಿಂದ ಹೊರಟು ಹೋದನು; ಮತ್ತು ದೊಡ್ಡ ಸಮೂಹಗಳು ಆತನನ್ನು ಹಿಂಬಾಲಿಸಿದರು. ಆಗ ಆತನು ಅವರೆಲ್ಲರನ್ನು ವಾಸಿ ಮಾಡಿದನು.
16ಯೇಸು ತನ್ನನ್ನು ಯಾರಿಗೂ ಪ್ರಕಟಿಸ ಬಾರದೆಂದು ಅವರಿಗೆ ಆಜ್ಞಾಪಿಸಿದನು;
17ಹೀಗೆ ಪ್ರವಾದಿಯಾದ ಯೆಶಾಯನಿಂದ ಹೇಳಲ್ಪಟ್ಟಿದ್ದು ನೆರವೇರಿತು; ಅದೇನಂದರೆ--
18ಇಗೋ, ನಾನು ಆರಿಸಿಕೊಂಡ ನನ್ನ ಸೇವಕನು; ನನ್ನ ಪ್ರಾಣವು ಬಹಳವಾಗಿ ಮೆಚ್ಚಿಕೊಂಡಿರುವ ನನ್ನ ಪ್ರಿಯನು; ನಾನು ಆತನ ಮೇಲೆ ನನ್ನ ಆತ್ಮನನ್ನು ಇರಿಸುವೆನು ಮತ್ತು ಆತನು ಅನ್ಯಜನಗಳಿಗೆ ನ್ಯಾಯವನ್ನು ತೋರಿ ಸುವನು.
19ಆತನು ಜಗಳವಾಡುವದಿಲ್ಲ, ಕೂಗಾಡು ವದೂ ಇಲ್ಲ; ಇಲ್ಲವೆ ಯಾವ ಮನುಷ್ಯನು ಬೀದಿಗಳಲ್ಲಿ ಆತನ ಸ್ವರವನ್ನು ಕೇಳಿಸಿಕೊಳ್ಳುವದೂ ಇಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ