ಯಾಜಕಕಾಂಡ 2:7

ನಿನ್ನ ಕಾಣಿಕೆಯು ಬಾಂಡ್ಲೆಯಲ್ಲಿ ಬೇಯಿಸಿದ ಆಹಾರ ವಾಗಿದ್ದರೆ ಅದು ನಯವಾದ ಎಣ್ಣೆಯಿಂದ ಕೂಡಿದ ಹಿಟ್ಟಿನಿಂದ ಮಾಡಿದ್ದಾಗಿರಬೇಕು.

ಸಂದರ್ಭದೊಂದಿಗೆ ಓದಿ · ಯಾಜಕಕಾಂಡ 2

5ನಿನ್ನ ಕಾಣಿಕೆಯು ಬೋಗುಣಿ ಯಲ್ಲಿ ಬೇಯಿಸಿದ ಆಹಾರ ಸಮರ್ಪಣೆಯಾಗಿದ್ದರೆ ಅದು ಹುಳಿಯಿಲ್ಲದ ನಯವಾದ ಹಿಟ್ಟಿನಿಂದ ಎಣ್ಣೆ ಮಿಶ್ರಿತವಾದದ್ದು ಆಗಿರಬೇಕು.

6ನೀನು ಅದನ್ನು ತುಂಡುಗಳನ್ನಾಗಿ ವಿಭಾಗಿಸಿ ಅದರ ಮೇಲೆ ಎಣ್ಣೆ ಸುರಿಯಬೇಕು; ಅದು ಆಹಾರ ಸಮರ್ಪಣೆಯಾಗಿದೆ.

7ನಿನ್ನ ಕಾಣಿಕೆಯು ಬಾಂಡ್ಲೆಯಲ್ಲಿ ಬೇಯಿಸಿದ ಆಹಾರ ವಾಗಿದ್ದರೆ ಅದು ನಯವಾದ ಎಣ್ಣೆಯಿಂದ ಕೂಡಿದ ಹಿಟ್ಟಿನಿಂದ ಮಾಡಿದ್ದಾಗಿರಬೇಕು.

8ನೀನು ಇವುಗಳಿಂದ ಮಾಡಿದ ಆಹಾರ ಸಮರ್ಪಣೆಯನ್ನು ಕರ್ತನಿಗೆ ತರಬೇಕು; ಅದು ಯಾಜಕನಿಗೆ ಒಪ್ಪಿಸಿದಾಗ ಅವನು ಅದನ್ನು ಯಜ್ಞವೇದಿಗೆ ತರುವನು.

9ಆಗ ಯಾಜಕನು ಅದರಿಂದ ಜ್ಞಾಪಕಾರ್ಥವಾದ ಆಹಾರ ಸಮರ್ಪಣೆ ಯನ್ನಾಗಿ ತೆಗೆದುಕೊಂಡು ಅದನ್ನು ಯಜ್ಞವೇದಿಯ ಮೇಲೆ ಸುಡಬೇಕು: ಅದು ಬೆಂಕಿಯಿಂದ ಮಾಡಿ ದ್ದಾಗಿದ್ದು ಕರ್ತನಿಗೆ ಸುವಾಸನೆಯ ಸಮರ್ಪಣೆಯಾಗಿ ರುವದು.

ಯಾಜಕಕಾಂಡ 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी