ಮಾರ್ಕನು 8:24

ಅವನು ಮೇಲಕ್ಕೆ ನೋಡಿ--ಮನುಷ್ಯರು ಮರಗಳ ಹಾಗೆ ನಡೆದಾಡುವದನ್ನು ನೋಡುತ್ತೇನೆ ಅಂದನು.

ಸಂದರ್ಭದೊಂದಿಗೆ ಓದಿ · ಮಾರ್ಕನು 8

22ತರುವಾಯ ಆತನು ಬೇತ್ಸಾಯಿದಕ್ಕೆ ಬಂದಾಗ ಅವರು ಒಬ್ಬ ಕುರುಡನನ್ನು ಆತನ ಬಳಿಗೆ ತಂದು ಅವನನ್ನು ಮುಟ್ಟಬೇಕೆಂದು ಆತನನ್ನು ಬೇಡಿಕೊಂಡರು.

23ಆತನು ಆ ಕುರುಡನ ಕೈಹಿಡಿದು ಊರಿನ ಹೊರಗೆ ಕರಕೊಂಡು ಹೋಗಿ ಅವನ ಕಣ್ಣುಗಳ ಮೇಲೆ ಉಗುಳಿ ತನ್ನ ಕೈಗಳನ್ನು ಅವನ ಮೇಲೆ ಇಟ್ಟು ಏನಾದರೂ ಕಾಣುತ್ತದೋ ಎಂದು ಅವನನ್ನು ಕೇಳಿದನು.

24ಅವನು ಮೇಲಕ್ಕೆ ನೋಡಿ--ಮನುಷ್ಯರು ಮರಗಳ ಹಾಗೆ ನಡೆದಾಡುವದನ್ನು ನೋಡುತ್ತೇನೆ ಅಂದನು.

25ತರುವಾಯ ಆತನು ತಿರಿಗಿ ಅವನ ಕಣ್ಣುಗಳ ಮೇಲೆ ತನ್ನ ಕೈಗಳನ್ನಿಟ್ಟು ಅವನು ಮೇಲಕ್ಕೆ ನೋಡುವಂತೆ ಮಾಡಿದನು; ಆಗ ಅವನು ಗುಣಹೊಂದಿದವನಾಗಿ ಪ್ರತಿ ಮನುಷ್ಯನನ್ನು ಸ್ಪಷ್ಟವಾಗಿ ನೋಡಿದನು.

26ತರುವಾಯ ಆತನು ಅವನಿಗೆ--ನೀನು ಊರೊಳಕ್ಕೆ ಹೋಗಬೇಡ ಇಲ್ಲವೆ ಊರಲ್ಲಿ ಯಾರಿಗೂ ಹೇಳಬೇಡ ಎಂದು ಹೇಳಿ ಅವನನ್ನು ಅವನ ಮನೆಗೆ ಕಳುಹಿಸಿ ಬಿಟ್ಟನು.

ಮಾರ್ಕನು 8 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी