ಪ್ರಲಾಪಗಳು 4:12

ಭೂ ರಾಜರೂ ವಿರೋಧಿಯೂ ಶತ್ರುವೂ ಯೆರೂಸಲೇ ಮಿನಲ್ಲಿ ಪ್ರವೇಶಿಸಿದ್ದನ್ನು ಪ್ರಪಂಚದ ಎಲ್ಲಾ ನಿವಾಸಿಗಳೂ ನಂಬುತ್ತಿರಲಿಲ್ಲ.

ಸಂದರ್ಭದೊಂದಿಗೆ ಓದಿ · ಪ್ರಲಾಪಗಳು 4

10ಕನಿಕರ ತುಂಬಿದ ಹೆಂಗಸರ ಕೈಗಳು ಅವರ ಸ್ವಂತ ಮಕ್ಕಳನ್ನೇ ಬೇಯಿಸಿದವು; ಇವರು ನನ್ನ ಜನರ ಮಗಳ ನಾಶದಲ್ಲಿ ಅವರಿಗೆ ಆಹಾರ ವಾದರು.

11ಕರ್ತನು ತನ್ನ ರೋಷವನ್ನು ತೀರಿಸಿ ದ್ದಾನೆ; ಆತನು ತನ್ನ ಉಗ್ರವಾದ ಕೋಪವನ್ನು ಸುರಿದಿದ್ದಾನೆ; ಚೀಯೋನಿನಲ್ಲಿ ಹೊತ್ತಿಸಿದ ಬೆಂಕಿಯು ಅದರ ಅಸ್ತಿವಾರಗಳನ್ನು ತಿಂದುಬಿಟ್ಟಿತು.

12ಭೂ ರಾಜರೂ ವಿರೋಧಿಯೂ ಶತ್ರುವೂ ಯೆರೂಸಲೇ ಮಿನಲ್ಲಿ ಪ್ರವೇಶಿಸಿದ್ದನ್ನು ಪ್ರಪಂಚದ ಎಲ್ಲಾ ನಿವಾಸಿಗಳೂ ನಂಬುತ್ತಿರಲಿಲ್ಲ.

13ಅವಳ ಪ್ರವಾದಿಗಳ ಪಾಪಗಳಿಗೋಸ್ಕರವೂ ಅವಳ ಯಾಜಕರ ಅಕ್ರಮಗಳಿ ಗೋಸ್ಕರವೂ ಹೀಗಾಯಿತು. ಯಾಕಂದರೆ ಇವರು ನೀತಿವಂತರ ರಕ್ತವನ್ನು ಅವಳ ಮಧ್ಯ ಚೆಲ್ಲಿದ್ದರು.

14ಅವರು ಬೀದಿಗಳಲ್ಲಿ ಕುರುಡರಂತೆ ಅಲೆದಾಡಿದರು, ಅವರು ರಕ್ತದಿಂದ ತಮ್ಮನ್ನು ತಾವೇ ಅಪವಿತ್ರಪಡಿಸಿ ಕೊಂಡರು; ಆದದರಿಂದ ಮನುಷ್ಯರು ಅವರ ವಸ್ತ್ರಗಳನ್ನು ಮುಟ್ಟಲಾರದೆ ಹೋದರು.

ಪ್ರಲಾಪಗಳು 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी