ಆಗ ಯಾಕೋಬನು ಫರೋಹನನ್ನು ಆಶೀರ್ವದಿಸಿ ಅವನ ಸನ್ನಿಧಿಯಿಂದ ಹೊರಟುಹೋದನು.
8ಫರೋಹನು ಯಾಕೋಬನಿಗೆ--ನಿನಗೆ ಎಷ್ಟು ವರುಷಗಳು ಅಂದಾಗ
9ಯಾಕೋಬನು ಫರೋಹನಿಗೆ--ನನ್ನ ಪ್ರವಾಸದ ದಿನಗಳು ನೂರ ಮೂವತ್ತು ವರುಷಗಳು. ನನ್ನ ಜೀವನದ ದಿನಗಳು ಸ್ವಲ್ಪವಾಗಿಯೂ ದುಃಖಕರವಾಗಿಯೂ ಇದ್ದವು. ನನ್ನ ತಂದೆಗಳು ತಾವು ಪ್ರವಾಸಿಗಳಾಗಿದ್ದ ಜೀವನದ ವರುಷಗಳ ದಿನಗಳಿಗೆ ನಾನು ಮುಟ್ಟಲಿಲ್ಲ ಅಂದನು.
10ಆಗ ಯಾಕೋಬನು ಫರೋಹನನ್ನು ಆಶೀರ್ವದಿಸಿ ಅವನ ಸನ್ನಿಧಿಯಿಂದ ಹೊರಟುಹೋದನು.
11ಯೋಸೇಫನು ತನ್ನ ತಂದೆಗೂ ತನ್ನ ಸಹೋದರ ರಿಗೂ ನಿವಾಸವನ್ನು ಕೊಟ್ಟು ಫರೋಹನ ಅಪ್ಪಣೆಯ ಪ್ರಕಾರ ಐಗುಪ್ತದೇಶದ ಉತ್ತಮವಾದದ್ದರಲ್ಲಿ ರಮ್ಸೇಸ್ ಸೀಮೆಯಲ್ಲಿ ಸ್ವಾಸ್ಥ್ಯವನ್ನು ಕೊಟ್ಟನು.
12ಯೋಸೇಫನು ತನ್ನ ತಂದೆಯನ್ನೂ ತನ್ನ ಸಹೋ ದರರನ್ನೂ ತನ್ನ ತಂದೆಯ ಮನೆಯವರೆಲ್ಲರನ್ನೂ ಕುಟುಂಬಗಳ ಪ್ರಕಾರ ಆಹಾರಕ್ಕೆ ಕೊಟ್ಟು ಅವರನ್ನು ಸಂರಕ್ಷಣೆ ಮಾಡಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ