೨ ಅರಸುಗಳು 9:21

ಯೋರಾಮನು ರಥಹೂಡಬೇಕೆಂದು ಹೇಳಿದನು. ಅವನ ರಥವು ಸಿದ್ಧವಾಯಿತು. ಆಗ ಇಸ್ರಾಯೇಲಿನ ಅರಸನಾದ ಯೋರಾಮನೂ ಯೆಹೂ ದದ ಅರಸನಾದ ಅಹಜ್ಯನೂ ಹೊರಟು ಅವನವನು ತನ್ನ ತನ್ನ ರಥದಲ್ಲಿ ಏರಿ ಯೇಹುವಿಗೆ ಎದುರಾಗಿ ಹೊರಟು ಇಜ್ರೇಲ್ಯನಾದ ನಾಬೋತನ ಹೊಲದಲ್ಲಿ ಅವನನ್ನು ಸಂಧಿಸಿದರು.

ಸಂದರ್ಭದೊಂದಿಗೆ ಓದಿ · ೨ ಅರಸುಗಳು 9

19ಆಗ ಬೇರೆ ರಾಹುತನನ್ನು ಕಳುಹಿಸಿದನು. ಇವನು ಅವರ ಬಳಿಗೆ ಹೋಗಿ--ಸಮಾಧಾನವೋ ಎಂದು ಅರಸನು ಕೇಳು ತ್ತಾನೆ ಅಂದನು. ಅದಕ್ಕೆ ಯೇಹುವು--ಸಮಾಧಾನ ನಿನಗೆ ಏನು--ನನ್ನ ಹಿಂದಕ್ಕೆ ಹೋಗು ಅಂದನು.

20ಆಗ ಕಾವಲುಗಾರನು--ಇವನೂ ಅವರ ಬಳಿಗೆ ಹೋಗಿ ತಿರಿಗಿ ಬರಲಿಲ್ಲ. ಇದಲ್ಲದೆ ಓಡಿಸುವದು ನಿಂಷಿಯ ಮಗನಾದ ಯೇಹುವು ಓಡಿಸುವ ಹಾಗಿದೆ; ಯಾಕಂದರೆ ಅವನು ಹುಚ್ಚುತನವಾಗಿ ಓಡಿಸುತ್ತಾನೆ ಅಂದನು.

21ಯೋರಾಮನು ರಥಹೂಡಬೇಕೆಂದು ಹೇಳಿದನು. ಅವನ ರಥವು ಸಿದ್ಧವಾಯಿತು. ಆಗ ಇಸ್ರಾಯೇಲಿನ ಅರಸನಾದ ಯೋರಾಮನೂ ಯೆಹೂ ದದ ಅರಸನಾದ ಅಹಜ್ಯನೂ ಹೊರಟು ಅವನವನು ತನ್ನ ತನ್ನ ರಥದಲ್ಲಿ ಏರಿ ಯೇಹುವಿಗೆ ಎದುರಾಗಿ ಹೊರಟು ಇಜ್ರೇಲ್ಯನಾದ ನಾಬೋತನ ಹೊಲದಲ್ಲಿ ಅವನನ್ನು ಸಂಧಿಸಿದರು.

22ಯೋರಾಮನು ಯೇಹು ವನ್ನು ನೋಡಿದಾಗ--ಯೇಹುವೇ, ಸಮಾಧಾನವೋ ಅಂದನು. ಅದಕ್ಕವನು--ನಿನ್ನ ತಾಯಿಯಾದ ಈಜೆ ಬೆಲಳ ಜಾರತ್ವವೂ ಅವಳ ಮಾಟಗಳೂ ಅಧಿಕವಾಗಿರು ವಾಗ ಸಮಾಧಾನವೇನು ಅಂದನು.

23ಆಗ ಯೋರಾ ಮನು ಅಹಜ್ಯನಿಗೆ--ಅಹಜ್ಯನೇ, ದ್ರೋಹ ಎಂದು ಹೇಳಿ ತನ್ನ ಕೈ ತಿರುಗಿಸಿಕೊಂಡು ಓಡಿಹೋದನು.

೨ ಅರಸುಗಳು 9 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी