ಪ್ರಸಂಗಿ 5:4

ದೇವರಿಗೆ ನೀನು ಪ್ರಮಾಣವನ್ನು ಮಾಡಿದರೆ ಅದನ್ನು ತೀರಿಸಲು ತಡಮಾಡಬೇಡ; ಮೂಢರಲ್ಲಿ ಆತನಿಗೆ ಸಂತೋಷವಿಲ್ಲ; ನೀನು ಪ್ರಮಾಣಮಾಡಿದ್ದನು ತೀರಿಸು.

ಸಂದರ್ಭದೊಂದಿಗೆ ಓದಿ · ಪ್ರಸಂಗಿ 5

2ನಿನ್ನ ಬಾಯಿಂದ ಆತುರಪಡದಿರು ಮತ್ತು ದೇವರ ಮುಂದೆ ಯಾವದನ್ನು ಉಚ್ಚರಿಸುವದಕ್ಕೆ ನಿನ್ನ ಹೃದಯವು ದುಡುಕದೇ ಇರಲಿ; ದೇವರು ಪರಲೋಕ ದಲ್ಲಿದ್ದಾನೆ; ನೀನು ಭೂಮಿಯ ಮೇಲೆ ಇದ್ದೀ; ಆದ ಕಾರಣ ನಿನ್ನ ಮಾತುಗಳು ಕೊಂಚವಾಗಿರಲಿ.

3ಬಹಳ ಕೆಲಸದ ಮೂಲಕ ಕನಸು ಉಂಟಾಗುತ್ತದೆ; ಬಹು ಮಾತುಗಳಿಂದ ಮೂಢನ ಧ್ವನಿಯು ಗೊತ್ತಾಗುತ್ತದೆ;

4ದೇವರಿಗೆ ನೀನು ಪ್ರಮಾಣವನ್ನು ಮಾಡಿದರೆ ಅದನ್ನು ತೀರಿಸಲು ತಡಮಾಡಬೇಡ; ಮೂಢರಲ್ಲಿ ಆತನಿಗೆ ಸಂತೋಷವಿಲ್ಲ; ನೀನು ಪ್ರಮಾಣಮಾಡಿದ್ದನು ತೀರಿಸು.

5ಪ್ರಮಾಣಮಾಡಿ ತೀರಿಸದೆ ಇರುವದಕ್ಕಿಂತ ಪ್ರಮಾಣಮಾಡದೆ ಇರುವದು ಒಳ್ಳೇದು.

6ನಿನ್ನ ಬಾಯಿಯು ನಿನ್ನ ದೇಹವನ್ನು ಪಾಪಮಾಡಿಸುವಂತೆ ಬಿಡಬೇಡ; ಇಲ್ಲವೆ ಅದು ತಪ್ಪು ಎಂದು ದೂತನ ಮುಂದೆ ಹೇಳಬೇಡ; ಇದರಿಂದ ದೇವರು ಯಾಕೆ ನಿನ್ನ ಮಾತಿಗೆ ಕೋಪಗೊಂಡು ನಿನ್ನ ಕೈಗಳ ಕೆಲಸವನ್ನು ಹಾಳುಮಾಡಬೇಕು?

ಪ್ರಸಂಗಿ 5 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी