ಅರಣ್ಯಕಾಂಡ 14:8

ಕರ್ತನು ನಮ್ಮಲ್ಲಿ ಇಷ್ಟಪಟ್ಟರೆ ಹಾಲು ಜೇನೂ ಹರಿಯುವ ಆ ದೇಶಕ್ಕೆ ನಮ್ಮನ್ನು ಬರಮಾಡಿ ಅದನ್ನು ನಮಗೆ ಕೊಡುವನು.

ಸಂದರ್ಭದೊಂದಿಗೆ ಓದಿ · ಅರಣ್ಯಕಾಂಡ 14

6ಆಗ ದೇಶವನ್ನು ಪಾಳತಿ ನೋಡಿದವರಲ್ಲಿದ್ದ ನೂನನ ಮಗನಾದ ಯೆಹೋಶುವನೂ ಯೆಫುನ್ನೆಯ ಮಗನಾದ ಕಾಲೇಬನೂ ತಮ್ಮ ವಸ್ತ್ರಗಳನ್ನು ಹರಕೊಂಡು

7ಇಸ್ರಾ ಯೇಲ್‌ ಮಕ್ಕಳ ಸಮಸ್ತ ಸಭೆಯ ಕೂಟಕ್ಕೆ--ಪಾಳತಿ ನೋಡುವದಕ್ಕೆ ನಾವು ದಾಟಿಹೋದ ದೇಶವು ಅತ್ಯು ತ್ತಮವಾದ ದೇಶವೇ.

8ಕರ್ತನು ನಮ್ಮಲ್ಲಿ ಇಷ್ಟಪಟ್ಟರೆ ಹಾಲು ಜೇನೂ ಹರಿಯುವ ಆ ದೇಶಕ್ಕೆ ನಮ್ಮನ್ನು ಬರಮಾಡಿ ಅದನ್ನು ನಮಗೆ ಕೊಡುವನು.

9ನೀವಾ ದರೋ ಕರ್ತನಿಗೆ ವಿರೋಧವಾಗಿ ಬೀಳಬೇಡಿರಿ, ಆ ದೇಶದ ಜನರಿಗೆ ಭಯಪಡಬೇಡಿರಿ, ಅವರು ನಮಗೆ ರೊಟ್ಟಿಯಾಗುವರು; ಅವರಿಗಿದ್ದ ಆಶ್ರಯವು ಅವರ ಬಳಿಯಿಂದ ಹೋಯಿತು; ಕರ್ತನು ನಮ್ಮ ಸಂಗಡ ಇದ್ದಾನೆ; ಅವರಿಗೆ ಭಯಪಡಬೇಡಿರಿ ಅಂದನು.

10ಸಭೆಯವರೆಲ್ಲರೂ ಅವರನ್ನು ಕಲ್ಲೆಸೆಯಬೇಕೆಂದಿ ದ್ದರು. ಆಗ ಕರ್ತನ ಮಹಿಮೆಯು ಸಭೆಯ ಗುಡಾರ ದಲ್ಲಿ ಇಸ್ರಾಯೇಲ್‌ ಮಕ್ಕಳಿಗೆಲ್ಲಾ ಪ್ರತ್ಯಕ್ಷವಾಯಿತು.

ಅರಣ್ಯಕಾಂಡ 14 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी