ಯಾಜಕಕಾಂಡ 23:38

ಕರ್ತನ ಸಬ್ಬತ್ತುಗಳ ಹೊರ ತಾಗಿಯೂ ನೀವು ಕರ್ತನಿಗೆ ಸಮರ್ಪಿಸುವ ನಿಮ್ಮ ದಾನ ಪ್ರಮಾಣಗಳ ನಿಮ್ಮ ಎಲ್ಲಾ ಸ್ವಇಷ್ಟವಾದ ಕಾಣಿಕೆಗಳ ಹೊರತಾಗಿಯೂ

ಸಂದರ್ಭದೊಂದಿಗೆ ಓದಿ · ಯಾಜಕಕಾಂಡ 23

36ಏಳು ದಿವಸ ನೀವು ಬೆಂಕಿಯಿಂದ ಮಾಡಿದ ಸಮರ್ಪಣೆಗಳನ್ನು ಕರ್ತನಿಗೆ ಅರ್ಪಿಸಬೇಕು. ಎಂಟನೆಯ ದಿವಸವು ನಿಮಗೆ ಪರಿ ಶುದ್ಧ ಕೂಟವಾಗಿರುವದು; ನೀವು ಬೆಂಕಿಯಿಂದ ಮಾಡಿದ ಸಮರ್ಪಣೆಯನ್ನು ಕರ್ತನಿಗೆ ಅರ್ಪಿಸಬೇಕು; ಅದೊಂದು ಗಂಭೀರ ಸಭೆಯಾಗಿರುವದು; ಅದರಲ್ಲಿ ನೀವು ಕಷ್ಟಕರವಾದ ಕೆಲಸವನ್ನು ಮಾಡಬಾರದು.

37ನೀವು ಪರಿಶುದ್ಧ ಸಭೆಯಾಗಿ ಪ್ರಕಟಿಸಬೇಕಾದ ಕರ್ತನ ಹಬ್ಬಗಳು ಇವೇ: ಇವುಗಳ ಒಂದೊಂದು ದಿವಸದಲ್ಲಿ ಕರ್ತನಿಗೆ ದಹನಬಲಿಯನ್ನೂ ಆಹಾರ ಸಮರ್ಪಣೆಯನ್ನೂ ಯಜ್ಞವನ್ನೂ ಪಾನಕ ಸಮರ್ಪಣೆ ಗಳನ್ನೂ ಅರ್ಪಿಸಬೇಕು.

38ಕರ್ತನ ಸಬ್ಬತ್ತುಗಳ ಹೊರ ತಾಗಿಯೂ ನೀವು ಕರ್ತನಿಗೆ ಸಮರ್ಪಿಸುವ ನಿಮ್ಮ ದಾನ ಪ್ರಮಾಣಗಳ ನಿಮ್ಮ ಎಲ್ಲಾ ಸ್ವಇಷ್ಟವಾದ ಕಾಣಿಕೆಗಳ ಹೊರತಾಗಿಯೂ

39ಏಳನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ನೀವು ಭೂಮಿಯ ಫಲವನ್ನು ಕೂಡಿಸಿದಾಗ ನೀವು ಕರ್ತನಿಗೆ ಏಳು ದಿವಸಗಳ ಹಬ್ಬ ವನ್ನು ಕೈಕೊಳ್ಳಬೇಕು. ಮೊದಲನೆಯ ದಿವಸವು ಸಬ್ಬತ್ತಾ ಗಿರಬೇಕು ಮತ್ತು ಎಂಟನೆಯ ದಿವಸವು ಸಬ್ಬತ್ತಾಗಿರ ಬೇಕು.

40ಮೊದಲನೆಯ ದಿವಸದಲ್ಲಿ ನೀವು ಸುಂದರ ವಾದ ಮರಗಳ ಕೊಂಬೆಗಳನ್ನೂ ಖರ್ಜೂರ ಮರಗಳ ಕೊಂಬೆಗಳನ್ನೂ ದಟ್ಟವಾದ ಮರಗಳ ಕೊಂಬೆಗಳನ್ನೂ ಹಳ್ಳದ ನೀರವಂಜಿ ಮರಗಳನ್ನೂ ತೆಗೆದುಕೊಂಡು ಏಳು ದಿನಗಳ ವರೆಗೆ ನಿಮ್ಮ ದೇವರಾಗಿರುವ ಕರ್ತನ ಎದುರಿನಲ್ಲಿ ಸಂತೋಷಪಡಬೇಕು.

ಯಾಜಕಕಾಂಡ 23 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी