೧ ಪೇತ್ರನು 2:19

ಒಬ್ಬನು ಅನ್ಯಾಯವಾಗಿ ಬಾಧೆಪಡುವವ ನಾಗಿದ್ದು ದೇವರ ವಿಷಯವಾದ ಮನಸ್ಸಾಕ್ಷಿಗೋಸ್ಕರ ಆ ದುಃಖವನ್ನು ಸಹಿಸಿಕೊಂಡರೆ ಅದು ಶ್ಲಾಘ್ಯವಾಗಿದೆ.

ಸಂದರ್ಭದೊಂದಿಗೆ ಓದಿ · ೧ ಪೇತ್ರನು 2

17ಎಲ್ಲರನ್ನು ಸನ್ಮಾನಿ ಸಿರಿ, ಸಹೋದರರನ್ನು ಪ್ರೀತಿಸಿರಿ, ದೇವರಿಗೆ ಭಯ ಪಡಿರಿ, ಅರಸನನ್ನು ಸನ್ಮಾನಿಸಿರಿ.

18ಸೇವಕರೇ, ನಿಮ್ಮ ಯಜಮಾನರಿಗೆ ಪೂರ್ಣ ಭಯದಿಂದ ಅಧೀನ ರಾಗಿರ್ರಿ. ಒಳ್ಳೆಯವರೂ ಸಾತ್ವಿಕರೂ ಆಗಿರುವವರಿಗೆ ಮಾತ್ರವಲ್ಲದೆ ವಕ್ರಬುದ್ಧಿಯುಳ್ಳವರಿಗೂ ವಿಧೇಯ ರಾಗಿರ್ರಿ.

19ಒಬ್ಬನು ಅನ್ಯಾಯವಾಗಿ ಬಾಧೆಪಡುವವ ನಾಗಿದ್ದು ದೇವರ ವಿಷಯವಾದ ಮನಸ್ಸಾಕ್ಷಿಗೋಸ್ಕರ ಆ ದುಃಖವನ್ನು ಸಹಿಸಿಕೊಂಡರೆ ಅದು ಶ್ಲಾಘ್ಯವಾಗಿದೆ.

20ತಪ್ಪುಮಾಡಿ ಗುದ್ದು ತಿನ್ನುವದರಲ್ಲಿ ನೀವು ತಾಳ್ಮೆ ಯಿಂದಿದ್ದರೆ ಅದರಿಂದೇನು ಹೆಚ್ಚಳ? ಆದರೆ ಒಳ್ಳೇ ದನ್ನು ಮಾಡಿ ಬಾಧೆಪಡುವದರಲ್ಲಿ ನೀವು ತಾಳ್ಮೆಯಿಂದಿ ದ್ದರೆ ಇದು ದೇವರಿಗೆ ಅಂಗೀಕೃತವಾಗಿದೆ.

21ಇದ ಕ್ಕಾಗಿಯೇ ನೀವು ಕರೆಯಲ್ಪಟ್ಟಿರಿ; ಕ್ರಿಸ್ತನು ಸಹ ನಮಗೋಸ್ಕರ ಬಾಧೆಯನ್ನನುಭವಿಸಿ ನೀವು ತನ್ನ ಹೆಜ್ಜೆಯ ಜಾಡಿನಲ್ಲಿ ನಡೆಯಬೇಕೆಂದು ನಮಗೆ ಮಾದರಿಯನ್ನು ಬಿಟ್ಟು ಹೋದನು.

೧ ಪೇತ್ರನು 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी