ಯೆರೆಮಿಯ 8:5

ಹಾಗಾದರೆ ಈ ಯೆರೂಸಲೇಮಿನ ಜನರು ನಿತ್ಯವಾದ ಹಿಂಜರಿಯುವಿಕೆಯಿಂದ ಯಾಕೆ ಹಿಂತಿರು ಗಿದ್ದಾರೆ? ಮೋಸವನ್ನು ಬಿಗಿಯಾಗಿ ಹಿಡಿಯುತ್ತಾರೆ, ಹಿಂದಿರುಗುವದಕ್ಕೆ ನಿರಾಕರಿಸುತ್ತಾರೆ.

ಸಂದರ್ಭದೊಂದಿಗೆ ಓದಿ · ಯೆರೆಮಿಯ 8

3ನಾನು ಉಳಿದವರನ್ನು ಓಡಿಸಿದ ಎಲ್ಲಾ ಸ್ಥಳಗಳಲ್ಲಿ ಜೀವಕ್ಕಿಂತ ಮರಣವನ್ನೇ ಆಯ್ದುಕೊಳ್ಳುವರೆಂದು ಸೈನ್ಯಗಳ ಕರ್ತನು ಅನ್ನುತ್ತಾನೆ.

4ಇದಲ್ಲದೆ ನೀನು ಅವರಿಗೆ ಹೇಳಬೇಕಾದದ್ದೇ ನಂದರೆ ಕರ್ತನು ಹೀಗೆ ಹೇಳುತ್ತಾನೆ--ಅವರು ಬಿದ್ದು ಮತ್ತೆ ಏಳರೋ? ಹಿಂಜರಿದವನು ಮತ್ತೆ ಬರುವದಿ ಲ್ಲವೋ?

5ಹಾಗಾದರೆ ಈ ಯೆರೂಸಲೇಮಿನ ಜನರು ನಿತ್ಯವಾದ ಹಿಂಜರಿಯುವಿಕೆಯಿಂದ ಯಾಕೆ ಹಿಂತಿರು ಗಿದ್ದಾರೆ? ಮೋಸವನ್ನು ಬಿಗಿಯಾಗಿ ಹಿಡಿಯುತ್ತಾರೆ, ಹಿಂದಿರುಗುವದಕ್ಕೆ ನಿರಾಕರಿಸುತ್ತಾರೆ.

6ನಾನು ಕಿವಿ ಗೊಟ್ಟು ಕೇಳಿದೆನು, ಆದರೆ ಅವರು ಯಥಾರ್ಥವಾಗಿ ಮಾತನಾಡಲಿಲ್ಲ. ಯಾವನಾದರೂ--ನಾನು ಎಂಥಾ ಕೆಲಸ ಮಾಡಿದ್ದೇನೆ ಎಂದು ಅಂದುಕೊಂಡು ತನ್ನ ಕೆಟ್ಟತನದ ನಿಮಿತ್ತ ಪಶ್ಚಾತ್ತಾಪ ಪಡಲಿಲ್ಲ; ಕುದುರೆ ಯುದ್ಧಕ್ಕೆ ರಭಸವಾಗಿ ಓಡುವ ಪ್ರಕಾರ ಪ್ರತಿಯೊ ಬ್ಬನೂ ತನ್ನ ದಾರಿಗೆ ತಿರುಗಿದ್ದಾನೆ.

7ಹೌದು, ಆಕಾಶ ದಲ್ಲಿ ಬಕಪಕ್ಷಿಯು ತನ್ನ ನಿಯಮಿತ ಕಾಲಗಳನ್ನು ತಿಳಿ ಯುತ್ತದೆ; ಪಾರಿವಾಳವೂ ಬಾನಕ್ಕಿಯೂ ಕೊಕ್ಕರೆಯೂ ತಾವು ಬರತಕ್ಕ ಸಮಯವನ್ನು ಗಮನಿಸುತ್ತವೆ. ಆದರೆ ನನ್ನ ಜನರು ಕರ್ತನ ನ್ಯಾಯ ತೀರ್ಪನ್ನು ಅರಿಯರು.

ಯೆರೆಮಿಯ 8 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी