ಮತ್ತಾಯನು 18:15

ಇದಲ್ಲದೆ ನಿನ್ನ ಸಹೋದರನು ನಿನಗೆ ವಿರೋಧ ವಾಗಿ ತಪ್ಪು ಮಾಡಿದರೆ ನೀನೂ ಅವನೂ ಮಾತ್ರ ಇರುವಾಗ ಅವನ ತಪ್ಪನ್ನು ಅವನಿಗೆ ತಿಳಿಸು; ಅವನು ನಿನ್ನ ಮಾತನ್ನು ಕೇಳಿದರೆ ನೀನು ನಿನ್ನ ಸಹೋದರನನ್ನು ಸಂಪಾದಿಸಿಕೊಂಡಿರುವಿ.

ಸಂದರ್ಭದೊಂದಿಗೆ ಓದಿ · ಮತ್ತಾಯನು 18

13ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ಅವನು ಅದನ್ನು ಕಂಡುಕೊಂಡರೆ ತಪ್ಪಿಸಿಕೊಳ್ಳದೆ ಇದ್ದ ತೊಂಭತ್ತೊಂಭತ್ತು ಕುರಿಗಳಿಗಿಂತ ಆದರ ವಿಷಯದಲ್ಲಿ ಹೆಚ್ಚು ಸಂತೋಷ ಪಡುತ್ತಾನೆ.

14ಅದರಂತೆಯೇ ಈ ಚಿಕ್ಕವರಲ್ಲಿ ಒಬ್ಬನಾದರೂ ನಾಶವಾಗುವದು ಪರಲೋಕದಲ್ಲಿರುವ ನಿಮ್ಮ ತಂದೆಯ ಚಿತ್ತವಲ್ಲ.

15ಇದಲ್ಲದೆ ನಿನ್ನ ಸಹೋದರನು ನಿನಗೆ ವಿರೋಧ ವಾಗಿ ತಪ್ಪು ಮಾಡಿದರೆ ನೀನೂ ಅವನೂ ಮಾತ್ರ ಇರುವಾಗ ಅವನ ತಪ್ಪನ್ನು ಅವನಿಗೆ ತಿಳಿಸು; ಅವನು ನಿನ್ನ ಮಾತನ್ನು ಕೇಳಿದರೆ ನೀನು ನಿನ್ನ ಸಹೋದರನನ್ನು ಸಂಪಾದಿಸಿಕೊಂಡಿರುವಿ.

16ಆದರೆ ಅವನು ನಿನ್ನ ಮಾತನ್ನು ಕೇಳದೆಹೋದರೆ ನಿನ್ನೊಂದಿಗೆ ಒಬ್ಬನನ್ನು ಅಥವಾ ಇಬ್ಬರನ್ನು ಕರಕೊಂಡು ಹೋಗು; ಹೀಗೆ ಇಬ್ಬರ ಇಲ್ಲವೆ ಮೂವರ ಸಾಕ್ಷಿಗಳ ಬಾಯಿಂದ ಪ್ರತಿಯೊಂದು ಸ್ಥಾಪಿಸಲ್ಪಡುವದು.

17ಅವನು ಅವರ ಮಾತುಗಳನ್ನೂ ಕೇಳುವದಕ್ಕೆ ಅಲಕ್ಷ್ಯಮಾಡಿದರೆ ಅದನ್ನು ಸಭೆಗೆ ತಿಳಿಸು. ಆದರೆ ಅವನು ಸಭೆಯ ಮಾತನ್ನೂ ಅಲಕ್ಷ್ಯಮಾಡಿದರೆ ಅವನು ನಿನಗೆ ಅನ್ಯನಂತೆಯೂ ಸುಂಕದವನಂತೆಯೂ ಇರಲಿ.

ಮತ್ತಾಯನು 18 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी