ನಾನೇ, ನಾನೇ, ಕರ್ತನಾಗಿದ್ದೇನೆ, ನನ್ನ ಹೊರತು ಯಾವ ರಕ್ಷಕನೂ ಇಲ್ಲ.
9ಎಲ್ಲಾ ಜನಾಂಗಗಳು ಒಟ್ಟಿಗೆ ಕೂಡಿಕೊಳ್ಳಲಿ, ಎಲ್ಲಾ ಜನರೂ ಸೇರಿಕೊಳ್ಳಲಿ. ಅವರಲ್ಲಿ ಇದನ್ನು ಪ್ರಕಟಿಸುವವರೂ ಹಿಂದಿನವು ಗಳನ್ನು ನಮಗೆ ತೋರಿಸುವವರು ಯಾರು? ನಾವು ನೀತಿವಂತರೆಂದು ಸ್ಥಾಪಿಸಿಕೊಳ್ಳುವದಕ್ಕೆ ಸಾಕ್ಷಿಗಳನ್ನು ಕರತರಲಿ; ಆ ಸಾಕ್ಷಿಗಳು ಇದನ್ನು ಕೇಳಿ ನಿಜವೆಂದು ಹೇಳಲಿ.
10ಕರ್ತನು ಹೇಳುವದೇನಂದರೆ--ನೀವು ನನ್ನ ಸಾಕ್ಷಿಗಳಾಗಿದ್ದೀರಿ; ನಾನೇ ಆತನೆಂದು ನೀವು ತಿಳಿದು ನಂಬಿ ಗ್ರಹಿಸುವ ಹಾಗೆಯೇ ನಾನು ನಿನ್ನನ್ನು ಸೇವಕನನ್ನಾಗಿ ಆರಿಸಿಕೊಂಡಿದ್ದೇನೆ. ನನಗಿಂತ ಮುಂಚೆ ಯೂ ನನ್ನ ನಂತರದಲ್ಲಿಯೂ ಯಾವ ದೇವರೂ ಇರಲಿಲ್ಲ.
11ನಾನೇ, ನಾನೇ, ಕರ್ತನಾಗಿದ್ದೇನೆ, ನನ್ನ ಹೊರತು ಯಾವ ರಕ್ಷಕನೂ ಇಲ್ಲ.
12ನಿಮ್ಮಲ್ಲಿ ಅನ್ಯದೇವರು ಇಲ್ಲದಿರುವಾಗಲೇ ನಾನೇ ರಕ್ಷಣೆ ಯನ್ನು ಪ್ರಕಟಿಸಿ ತೋರಿಸಿದ್ದೇನೆ; ಆದದರಿಂದ ನೀವು ನನ್ನ ಸಾಕ್ಷಿಗಳು; ನಾನೇ ದೇವರೆಂದು ಕರ್ತನು ನುಡಿಯು ತ್ತಾನೆ.
13ಹೌದು, ಅಂದಿನಿಂದಲೇ ನಾನಿದ್ದೇನೆ; ನನ್ನ ಕೈಯಿಂದ ಬಿಡಿಸುವವರು ಯಾರೂ ಇಲ್ಲ; ನನ್ನ ಕೆಲಸಕ್ಕೆ ಅಡ್ಡಿ ಬರುವವನಾರು?
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ