ಬೆಲಿಯಾಳನ ಕೂಡ ಕ್ರಿಸ್ತನಿಗೆ ಒಪ್ಪಂದವೇನು? ನಂಬದಿರುವವನ ಕೂಡ ನಂಬುವ ವನಿಗೆ ಪಾಲುಗಾರಿಕೆ ಏನು?
13ನಿಮ್ಮ ವಿಷಯದಲ್ಲಿ ನಮ್ಮ ಅಂತಃ ಕರುಣೆಯ ಫಲವಾಗಿ ನೀವು ನಿಮ್ಮ ಹೃದಯವನ್ನು ವಿಶಾಲಮಾಡಿಕೊಳ್ಳಿರಿ; (ನೀವು ನನ್ನ ಮಕ್ಕಳೆಂದು ನಾನು ಹೇಳುತ್ತೇನೆ).
14ನೀವು ಅವಿಶ್ವಾಸಿಗಳೊಂದಿಗೆ ಸೇರಿ ಸಮವಲ್ಲದ ನೊಗವನ್ನು ಹೊರಬೇಡಿರಿ; ಯಾಕಂದರೆ ಅನೀತಿಯ ಕೂಡ ನೀತಿಗೆ ಅನ್ಯೋನ್ಯತೆ ಏನು? ಕತ್ತಲೆಯ ಕೂಡ ಬೆಳಕಿಗೆ ಐಕ್ಯವೇನು?
15ಬೆಲಿಯಾಳನ ಕೂಡ ಕ್ರಿಸ್ತನಿಗೆ ಒಪ್ಪಂದವೇನು? ನಂಬದಿರುವವನ ಕೂಡ ನಂಬುವ ವನಿಗೆ ಪಾಲುಗಾರಿಕೆ ಏನು?
16ವಿಗ್ರಹಗಳ ಕೂಡ ದೇವರ ಮಂದಿರಕ್ಕೆ ಒಪ್ಪಿಗೆ ಏನು? ಯಾಕಂದರೆ ನೀವು ಜೀವವುಳ್ಳ ದೇವರ ಮಂದಿರವಾಗಿದ್ದೀರಲ್ಲಾ, ಇದರ ಸಂಬಂಧವಾಗಿ ದೇವರು--ನಾನು ಅವರಲ್ಲಿ ವಾಸಿಸುತ್ತಾ ತಿರುಗಾಡುವೆನು, ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು ಎಂದು ಹೇಳಿದ್ದಾನೆ.
17ಆದದರಿಂದ--ಅವರ ಮಧ್ಯದಲ್ಲಿಂದ ನೀವು ಹೊರಗೆ ಬಂದು ಪ್ರತ್ಯೇಕವಾಗಿರಿ. ಇದಲ್ಲದೆ ಅಶುದ್ಧವಾದ ಯಾವದನ್ನೂ ಮುಟ್ಟದಿರಿ ಎಂದು ಕರ್ತನು ಹೇಳುತ್ತಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ