ಪ್ರಕಟನೆ 18:22

ನಿನ್ನಲ್ಲಿ ವೀಣೆಗಾರರೂ ವಾದ್ಯ ಗಾರರೂ ಕೊಳಲೂದುವವರೂ ತುತೂರಿಯವರು ಮಾಡುವ ಧ್ವನಿಯೂ ಇನ್ನೆಂದಿಗೂ ಕೇಳಿಸುವದಿಲ್ಲ. ಯಾವ ವಿಧವಾದ ಕೈಗಾರಿಕೆಯನ್ನು ಮಾಡುವವರು ನಿಮ್ಮಲ್ಲಿ ಇನ್ನೆಂದಿಗೂ ಸಿಕ್ಕುವದಿಲ್ಲ; ಬೀಸುವ ಕಲ್ಲಿನ ಶಬ್ದವೂ ನಿನ್ನಲ್ಲಿ ಇನ್ನೆಂದಿಗೂ ಕೇಳಿಸುವದಿಲ್ಲ.

ಸಂದರ್ಭದೊಂದಿಗೆ ಓದಿ · ಪ್ರಕಟನೆ 18

20ಪರಲೋಕವೇ, ಪರಿಶುದ್ಧರಾದ ಅಪೊಸ್ತಲರೇ, ಪ್ರವಾದಿಗಳೇ, ಅವಳ ವಿಷಯವಾಗಿ ಆನಂದಪಡಿರಿ. ಯಾಕಂದರೆ ನಿಮ್ಮ ನಿಮಿತ್ತವಾಗಿ ದೇವರು ಇವಳಿಗೆ ಪ್ರತಿ ದಂಡನೆಯನ್ನು ಮಾಡಿದನು ಎಂದು ಹೇಳಿತು.

21ಆಗ ಬಲಿಷ್ಠನಾದ ಒಬ್ಬ ದೂತನು ಬೀಸುವ ದೊಡ್ಡ ಕಲ್ಲಿನಂತಿರುವ ಒಂದು ಕಲ್ಲನ್ನು ಎತ್ತಿ ಸಮುದ್ರ ದೊಳಗೆ ಹಾಕಿ--ಮಹಾ ಪಟ್ಟಣವಾದ ಆ ಬಾಬೆಲು ಹೀಗೆಯೇ ಬಲಾತ್ಕಾರದಿಂದ ಕೆಡವಲ್ಲಟ್ಟು ಇನ್ನೆಂದಿಗೂ ಕಾಣಿಸುವದಿಲ್ಲ.

22ನಿನ್ನಲ್ಲಿ ವೀಣೆಗಾರರೂ ವಾದ್ಯ ಗಾರರೂ ಕೊಳಲೂದುವವರೂ ತುತೂರಿಯವರು ಮಾಡುವ ಧ್ವನಿಯೂ ಇನ್ನೆಂದಿಗೂ ಕೇಳಿಸುವದಿಲ್ಲ. ಯಾವ ವಿಧವಾದ ಕೈಗಾರಿಕೆಯನ್ನು ಮಾಡುವವರು ನಿಮ್ಮಲ್ಲಿ ಇನ್ನೆಂದಿಗೂ ಸಿಕ್ಕುವದಿಲ್ಲ; ಬೀಸುವ ಕಲ್ಲಿನ ಶಬ್ದವೂ ನಿನ್ನಲ್ಲಿ ಇನ್ನೆಂದಿಗೂ ಕೇಳಿಸುವದಿಲ್ಲ.

23ದೀಪದ ಬೆಳಕು ನಿನ್ನಲ್ಲಿ ಇನ್ನೆಂದಿಗೂ ಪ್ರಕಾಶಿಸು ವದಿಲ್ಲ. ವಧೂವರರ ಸ್ವರವು ನಿನ್ನಲ್ಲಿ ಇನ್ನೆಂದಿಗೂ ಕೇಳಿಸುವದಿಲ್ಲ; ನಿನ್ನ ವರ್ತಕರು ಭೂಮಿಯ ಪ್ರಧಾನ ರಾಗಿದ್ದದ್ದಲ್ಲದೆ ನಿನ್ನ ಮಾಟದಿಂದ ಎಲ್ಲಾ ಜನಾಂಗ ದವರು ಮೋಸ ಹೋದರು.

24ಪ್ರವಾದಿಗಳ, ಪರಿ ಶುದ್ಧರ ಮತ್ತು ಭೂಮಿಯ ಮೇಲೆ ಕೊಲ್ಲಲ್ಪಟ್ಟವರೆಲ್ಲರ ರಕ್ತವು ನಿನ್ನಲ್ಲಿ ಸಿಕ್ಕಿತು ಎಂದು ಹೇಳಿದನು.

ಪ್ರಕಟನೆ 18 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी