೧ ಸಮುವೇಲನು 13:14

ಆದರೆ ಈಗ ನಿನ್ನ ರಾಜ್ಯವು ನಿಲ್ಲಲಾರದು. ಕರ್ತನು ನಿನಗೆ ಆಜ್ಞಾಪಿಸಿ ದ್ದನ್ನು ನೀನು ಕೈಕೊಳ್ಳದೆ ಹೋದದರಿಂದ ಆತನು ತನ್ನ ಹೃದಯಕ್ಕೆ ಅನುಸರಣೆಯಾದ ಒಬ್ಬ ಮನುಷ್ಯ ನನ್ನು ಹುಡುಕಿ ಅವನನ್ನು ತನ್ನ ಜನರ ಮೇಲೆ ನಾಯಕನನ್ನಾಗಿ ನೇಮಿಸಿದ್ದಾನೆ ಅಂದನು.

ಸಂದರ್ಭದೊಂದಿಗೆ ಓದಿ · ೧ ಸಮುವೇಲನು 13

12ನಾನು ಕಂಡಿದ್ದರಿಂದ ಫಿಲಿಷ್ಟಿಯರು ಗಿಲ್ಗಾಲಿನಲ್ಲಿ ರುವ ನನ್ನ ಬಳಿಗೆ ಬರುವರು ಎಂದೂ ನಾನು ಕರ್ತನ ದಯೆ ಬೇಡಿಕೊಳ್ಳಲಿಲ್ಲವೆಂದೂ ಹೇಳಿ ಮುಂದಾಗಿ ದಹನಬಲಿಯನ್ನು ಅರ್ಪಿಸಿದೆನು ಅಂದನು.

13ಸಮು ವೇಲನು ಸೌಲನಿಗೆ--ನೀನು ಬುದ್ಧಿಹೀನವಾದ ಕೆಲಸ ಮಾಡಿದ್ದೀ; ನಿನ್ನ ದೇವರಾದ ಕರ್ತನು ನಿನಗೆ ಆಜ್ಞಾಪಿಸಿದ ಆಜ್ಞೆಯನ್ನು ಕೈಕೊಳ್ಳಲಿಲ್ಲ. ಕರ್ತನು ಇಸ್ರಾಯೇಲ್ಯರಲ್ಲಿ ನಿನ್ನ ರಾಜ್ಯವನ್ನು ಎಂದೆಂದಿಗೂ ಸ್ಥಿರಪಡಿಸುವದಕ್ಕೆ ಇದ್ದನು.

14ಆದರೆ ಈಗ ನಿನ್ನ ರಾಜ್ಯವು ನಿಲ್ಲಲಾರದು. ಕರ್ತನು ನಿನಗೆ ಆಜ್ಞಾಪಿಸಿ ದ್ದನ್ನು ನೀನು ಕೈಕೊಳ್ಳದೆ ಹೋದದರಿಂದ ಆತನು ತನ್ನ ಹೃದಯಕ್ಕೆ ಅನುಸರಣೆಯಾದ ಒಬ್ಬ ಮನುಷ್ಯ ನನ್ನು ಹುಡುಕಿ ಅವನನ್ನು ತನ್ನ ಜನರ ಮೇಲೆ ನಾಯಕನನ್ನಾಗಿ ನೇಮಿಸಿದ್ದಾನೆ ಅಂದನು.

15ಸಮು ವೇಲನು ಎದ್ದು ಗಿಲ್ಗಾಲಿನಿಂದ ಬೆನ್ಯಾವಿಾನ್‌ ದೇಶದ ಗಿಬೆಯಕ್ಕೆ ಹೋದನು. ಸೌಲನು ತನ್ನ ಸಂಗಡ ಇದ್ದ ಜನರನ್ನು ಲೆಕ್ಕಮಾಡಿದಾಗ ಅವರು ಸುಮಾರು ಆರು ನೂರು ಜನರಿದ್ದರು.

16ಸೌಲನೂ ಅವನ ಮಗನಾದ ಯೋನಾತಾನನೂ ಅವನ ಸಂಗಡ ಇರುವ ಜನರೂ ಸಹಿತವಾಗಿ ಬೆನ್ಯಾ ವಿಾನ್‌ ದೇಶದ ಗಿಬೆಯಲ್ಲಿದ್ದರು. ಆದರೆ ಫಿಲಿಷ್ಟಿಯರು ಮಿಕ್ಮಾಷಿನಲ್ಲಿ ಇಳಿದುಕೊಂಡಿದ್ದರು.

೧ ಸಮುವೇಲನು 13 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी