ಙ್ಞಾನೋಕ್ತಿಗಳು 27:9

ತೈಲವೂ ಸುಗಂಧ ದ್ರವ್ಯವೂ ಹೃದಯವನ್ನು ಸಂತೋಷಪಡಿಸುತ್ತದೆ, ಹಾಗೆಯೇ ಆದರಣೆಯ ಸಲಹೆಯಿಂದ ಸ್ನೇಹಿತನ ಮಧುರತ್ವವು ಇರುತ್ತದೆ.

ಸಂದರ್ಭದೊಂದಿಗೆ ಓದಿ · ಙ್ಞಾನೋಕ್ತಿಗಳು 27

7ತೃಪ್ತಿ ಹೊಂದಿದವನು ಜೇನು ತುಪ್ಪವನ್ನೂ ಅಸಹ್ಯಿಸಿಕೊಳ್ಳು ತ್ತಾನೆ; ಹಸಿದವನಿಗೆ ಕಹಿಯಾದ ಪ್ರತಿಯೊಂದು ವಸ್ತುವು ಸಿಹಿಯಾಗಿದೆ.

8ತನ್ನ ಸ್ಥಳವನ್ನು ಬಿಟ್ಟು ಅಲೆಯುವ ಮನುಷ್ಯನು ತನ್ನ ಗೂಡನ್ನು ಬಿಟ್ಟು ಅಲೆಯುವ ಪಕ್ಷಿ ಯಂತೆ ಇದ್ದಾನೆ.

9ತೈಲವೂ ಸುಗಂಧ ದ್ರವ್ಯವೂ ಹೃದಯವನ್ನು ಸಂತೋಷಪಡಿಸುತ್ತದೆ, ಹಾಗೆಯೇ ಆದರಣೆಯ ಸಲಹೆಯಿಂದ ಸ್ನೇಹಿತನ ಮಧುರತ್ವವು ಇರುತ್ತದೆ.

10ನಿನ್ನ ಸ್ನೇಹಿತನನ್ನೂ ನಿನ್ನ ತಂದೆಯ ಸ್ನೇಹಿತನನ್ನೂ ತ್ಯಜಿಸಬೇಡ; ಅಲ್ಲದೆ ನಿನ್ನ ಇಕ್ಕಟ್ಟಿನ ದಿನದಲ್ಲಿ ನಿನ್ನ ಸಹೋದರನ ಮನೆಗೆ ಹೋಗಬೇಡ; ದೂರವಾಗಿರುವ ಸಹೋದರನಿಗಿಂತ ಹತ್ತಿರವಾಗಿರುವ ನೆರೆಯವನೇ ಲೇಸು.

11ನಿನ್ನನ್ನು ನಿಂದಿಸುವವರಿಗೆ ಉತ್ತರಿಸುವಂತೆ ನಿನ್ನ ಹೃದಯವನ್ನು ಸಂತೋಷಪಡಿಸುವ ಹಾಗೆ ನನ್ನ ಮಗನೇ, ಜ್ಞಾನಿಯಾಗಿರು.

ಙ್ಞಾನೋಕ್ತಿಗಳು 27 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी