೧ ಯೋಹಾನನು 2:14

ತಂದೆಗಳೇ, ಆದಿ ಯಿಂದಿರುವಾತನನ್ನು ನೀವು ಬಲ್ಲವರಾಗಿರುವದರಿಂದ ನಿಮಗೆ ಬರೆದಿದ್ದೇನೆ. ಯೌವನಸ್ಥರೇ, ನೀವು ಶಕ್ತರಾಗಿ ರುವದರಿಂದಲೂ ದೇವರ ವಾಕ್ಯವು ನಿಮ್ಮಲ್ಲಿ ನೆಲೆ ಗೊಂಡಿರುವದರಿಂದಲೂ ನೀವು ಕೆಡುಕನನ್ನು ಜಯಿಸಿ ರುವದರಿಂದಲೂ ನಿಮಗೆ ಬರೆದಿದ್ದೇನೆ.

ಸಂದರ್ಭದೊಂದಿಗೆ ಓದಿ · ೧ ಯೋಹಾನನು 2

12ಚಿಕ್ಕ ಮಕ್ಕಳೇ, ಆತನ ಹೆಸರಿನ ನಿಮಿತ್ತ ನಿಮ್ಮ ಪಾಪಗಳು ಕ್ಷಮಿಸಲ್ಪಟ್ಟಿರುವದರಿಂದ ನಾನು ನಿಮಗೆ ಬರೆಯುತ್ತೇನೆ.

13ತಂದೆಗಳೇ, ಆದಿಯಿಂದಿರುವಾತ ನನ್ನು ನೀವು ಬಲ್ಲವರಾಗಿರುವದರಿಂದ ನಾನು ನಿಮಗೆ ಬರೆಯುತ್ತೇನೆ; ಯೌವನಸ್ಥರೇ, ನೀವು ಕೆಡುಕನನ್ನು ಜಯಿಸಿರುವದರಿಂದ ನಿಮಗೆ ಬರೆಯುತ್ತೇನೆ; ಚಿಕ್ಕ ಮಕ್ಕಳಿರಾ, ನೀವು ತಂದೆಯನ್ನು ಬಲ್ಲವರಾಗಿರುವದ ರಿಂದ ನಿಮಗೆ ಬರೆಯುತ್ತೇನೆ.

14ತಂದೆಗಳೇ, ಆದಿ ಯಿಂದಿರುವಾತನನ್ನು ನೀವು ಬಲ್ಲವರಾಗಿರುವದರಿಂದ ನಿಮಗೆ ಬರೆದಿದ್ದೇನೆ. ಯೌವನಸ್ಥರೇ, ನೀವು ಶಕ್ತರಾಗಿ ರುವದರಿಂದಲೂ ದೇವರ ವಾಕ್ಯವು ನಿಮ್ಮಲ್ಲಿ ನೆಲೆ ಗೊಂಡಿರುವದರಿಂದಲೂ ನೀವು ಕೆಡುಕನನ್ನು ಜಯಿಸಿ ರುವದರಿಂದಲೂ ನಿಮಗೆ ಬರೆದಿದ್ದೇನೆ.

15ಲೋಕವನ್ನಾಗಲಿ ಲೋಕದಲ್ಲಿರುವವುಗಳ ನ್ನಾಗಲಿ ಪ್ರೀತಿಸಬೇಡಿರಿ. ಯಾವನಾದರೂ ಲೋಕ ವನ್ನು ಪ್ರೀತಿಸಿದರೆ ತಂದೆಯ ಪ್ರೀತಿಯು ಅವನಲ್ಲಿಲ್ಲ.

16ಲೋಕದಲ್ಲಿರುವವುಗಳೆಲ್ಲವು ಅಂದರೆ ಶರೀರದಾಶೆ, ಕಣ್ಣಿನಾಶೆ, ಜೀವನದ ಗರ್ವ ಇವು ತಂದೆಗೆ ಸಂಬಂಧ ಪಟ್ಟವುಗಳಲ್ಲ, ಲೋಕಕ್ಕೆ ಸಂಬಂಧಪಟ್ಟವುಗಳಾಗಿವೆ.

೧ ಯೋಹಾನನು 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी