ನೀನು ಯಾವಾಗಲೂ ನಾನು ಆಶ್ರಯಿಸಿಕೊಳ್ಳುವ ಬಲಸ್ಥಾನವಾಗಿರು. ನನ್ನನ್ನು ರಕ್ಷಿಸುವದಕ್ಕೆ ಆಜ್ಞಾಪಿಸಿದ್ದೀ, ನನ್ನ ಬಂಡೆಯೂ ಕೋಟೆಯೂ ನೀನೇ.
1ಓ ಕರ್ತನೇ, ನಾನು ನಿನ್ನಲ್ಲಿ ಭರವಸವನ್ನಿಟ್ಟಿದ್ದೇನೆ; ನನಗೆ ಎಂದಿಗೂ ಆಶಾ ಭಂಗವಾಗದಿರಲಿ.
3ನೀನು ಯಾವಾಗಲೂ ನಾನು ಆಶ್ರಯಿಸಿಕೊಳ್ಳುವ ಬಲಸ್ಥಾನವಾಗಿರು. ನನ್ನನ್ನು ರಕ್ಷಿಸುವದಕ್ಕೆ ಆಜ್ಞಾಪಿಸಿದ್ದೀ, ನನ್ನ ಬಂಡೆಯೂ ಕೋಟೆಯೂ ನೀನೇ.
4ಓ ನನ್ನ ದೇವರೇ, ದುಷ್ಟನ ಕೈಗೂ ಅನ್ಯಾಯ ಮಾಡುವ ಕ್ರೂರನ ಕೈಗೂ ನನ್ನನ್ನು ತಪ್ಪಿಸು.
5ಓ ಕರ್ತನಾದ ದೇವರೇ, ನೀನು ನನ್ನ ನಿರೀಕ್ಷೆಯೂ ನನ್ನ ಯೌವನದಿಂದ ನನ್ನ ಭರವಸವೂ ಆಗಿದ್ದೀ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ