ಯೆರೆಮಿಯ 21:3

ಆಗ ಯೆರೆವಿಾಯನು ಅವರಿಗೆ ಹೇಳಿದ್ದೇನಂ ದರೆ--ಚಿದ್ಕೀಯನಿಗೆ ಹೀಗೆ ಹೇಳಿರಿ--

ಸಂದರ್ಭದೊಂದಿಗೆ ಓದಿ · ಯೆರೆಮಿಯ 21

1ಅರಸನಾದ ಚಿದ್ಕೀಯನು ಮಲ್ಕೀಯನ ಮಗನಾದ ಪಷ್ಹೂರನನ್ನೂ ಮಾಸೇಯನ ಮಗನೂ ಯಾಜಕನಾದ ಚೆಫನ್ಯನನ್ನೂ

2ಅವನ ಬಳಿಗೆ ಕಳುಹಿಸಿ--ನಮಗೋಸ್ಕರ ಕರ್ತನನ್ನು ವಿಚಾರಿಸು; ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನಮಗೆ ವಿರೋಧವಾಗಿ ಯುದ್ಧಮಾಡುತ್ತಾನೆ; ಒಂದು ವೇಳೆ ಅವನು ನಮ್ಮನ್ನು ಬಿಟ್ಟು ಹೊರಟುಹೋಗುವ ಹಾಗೆ ಕರ್ತನು ತನ್ನ ಎಲ್ಲಾ ಅದ್ಭುತಗಳ ಪ್ರಕಾರ ನಮಗೆ ಮಾಡುತ್ತಾನೆಂದು ಹೇಳಿಸಿದಾಗ ಯೆರೆವಿಾಯನಿಗೆ ಕರ್ತನ ವಾಕ್ಯವು ಬಂತು.

3ಆಗ ಯೆರೆವಿಾಯನು ಅವರಿಗೆ ಹೇಳಿದ್ದೇನಂ ದರೆ--ಚಿದ್ಕೀಯನಿಗೆ ಹೀಗೆ ಹೇಳಿರಿ--

4ಇಸ್ರಾಯೇ ಲಿನ ದೇವರಾದ ಯೆಹೋವನು ಹೇಳುವದೇನಂದರೆ, ಇಗೋ, ಗೋಡೆಯ ಹೊರಗೆ ನಿಮಗೆ ಮುತ್ತಿಗೆ ಹಾಕುವ ಬಾಬೆಲಿನ ಅರಸನಿಗೂ ಕಸ್ದೀಯರಿಗೂ ವಿರೋಧವಾಗಿ ನೀವು ಯುದ್ಧಮಾಡುವದಕ್ಕೆ ನಿಮ್ಮ ಕೈಗಳಲ್ಲಿರುವ ಯುದ್ಧದ ಆಯುಧಗಳನ್ನು ನಾನು ಹಿಂದಕ್ಕೆ ತಳ್ಳಿ ಅವರನ್ನು ಈ ಪಟ್ಟಣದ ಮಧ್ಯದಲ್ಲಿ ಕೂಡಿ ಬರುವಂತೆ ಮಾಡುತ್ತೇನೆ.

5ನಾನೇ ಚಾಚಿದ ಕೈಯಿಂದಲೂ ಬಲವಾದ ತೋಳಿನಿಂದಲೂ ಕೋಪ ದಿಂದಲೂ ಉಗ್ರದಿಂದಲೂ ಮಹಾರೌದ್ರದಿಂದಲೂ ನಿಮಗೆ ವಿರೋಧವಾಗಿ ಯುದ್ಧಮಾಡುವೆನು.

ಯೆರೆಮಿಯ 21 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी