ಅರಣ್ಯಕಾಂಡ 18:10

ನೀನು ಅದನ್ನು ಪರಿಶುದ್ಧ ಸ್ಥಳದಲ್ಲಿ ತಿನ್ನಬೇಕು; ಎಲ್ಲಾ ಗಂಡಸರು ಅದನ್ನು ತಿನ್ನಬೇಕು. ಅದು ನಿನಗೆ ಪರಿಶುದ್ಧವಾಗಿರುವದು.

ಸಂದರ್ಭದೊಂದಿಗೆ ಓದಿ · ಅರಣ್ಯಕಾಂಡ 18

8ಕರ್ತನು ಮಾತನಾಡಿ ಆರೋನನಿಗೆ--ಇಗೋ, ನಾನು ನಿನಗೆ ಎತ್ತುವ ಅರ್ಪಣೆಗಳ ಅಪ್ಪಣೆಗಳನ್ನು ಕೊಟ್ಟಿದ್ದೇನೆ. ಇಸ್ರಾಯೇಲ್‌ ಮಕ್ಕಳು ಪರಿಶುದ್ಧ ಮಾಡುವ ಎಲ್ಲಾದರಲ್ಲಿ ನಾನು ಅವುಗಳನ್ನು ಅಭಿಷೇಕ ಕ್ಕೋಸ್ಕರ ನಿನಗೂ ನಿನ್ನ ಮಕ್ಕಳಿಗೂ ನಿತ್ಯಕಟ್ಟಳೆಯಾಗಿ ಕೊಟ್ಟಿದ್ದೇನೆ.

9ಬೆಂಕಿಗೆ ಒಳಗಾಗದ ಅತೀ ಪರಿಶುದ್ಧ ವಾದವುಗಳಲ್ಲಿ ನಿನಗಾಗಬೇಕಾದವುಗಳು ಯಾವ ವೆಂದರೆ--ಅವರ ಅರ್ಪಣೆಗಳೆಲ್ಲಾ ಅಂದರೆ ಅವರು ನನಗೆ ತರುವ ಆಹಾರ ಸಮರ್ಪಣೆಗಳು ಪಾಪದ ಬಲಿಗಳು ಅಪರಾಧದ ಬಲಿಗಳು ಇವೆಲ್ಲಾ ಅತೀ ಪರಿಶುದ್ಧವಾಗಿ ನಿನಗೂ ನಿನ್ನ ಕುಮಾರರಿಗೂ ಇರಬೇಕು.

10ನೀನು ಅದನ್ನು ಪರಿಶುದ್ಧ ಸ್ಥಳದಲ್ಲಿ ತಿನ್ನಬೇಕು; ಎಲ್ಲಾ ಗಂಡಸರು ಅದನ್ನು ತಿನ್ನಬೇಕು. ಅದು ನಿನಗೆ ಪರಿಶುದ್ಧವಾಗಿರುವದು.

11ಇದು ನಿನ್ನದಾಗಿದೆ. ಅವರು ಕೊಟ್ಟ ಎತ್ತುವ ಅರ್ಪಣೆಯೂ ಇಸ್ರಾಯೇಲ್‌ ಮಕ್ಕಳು ಆಡಿಸುವ ಎಲ್ಲಾ ಅರ್ಪಣೆಗಳೂ; ಅವುಗಳನ್ನು ನಾನು ನಿನಗೂ ನಿನ್ನ ಕುಮಾರರಿಗೂ ಕುಮಾರ್ತೆಯರಿಗೂ ಶಾಶ್ವತ ಕಟ್ಟಳೆಯಾಗಿ ಕೊಟ್ಟಿದ್ದೇನೆ; ನಿನ್ನ ಮನೆಯಲ್ಲಿರುವ ಶುದ್ಧನಾದ ಪ್ರತಿಯೊಬ್ಬನು ಅದನ್ನು ತಿನ್ನಬಹುದು.

12ಉತ್ತಮವಾದ ಎಲ್ಲಾ ಎಣ್ಣೆಯೂ ದ್ರಾಕ್ಷಾರಸವೂ ಗೋಧಿಯೂ ಅವರು ಕರ್ತನಿಗೆ ಕೊಡುವ ಅವುಗಳ ಪ್ರಥಮ ಫಲಗಳನ್ನೂ ನಿನಗೆ ಕೊಟ್ಟಿದ್ದೇನೆ.

ಅರಣ್ಯಕಾಂಡ 18 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी