ಯೆಶಾಯ 9:4

ಅವನ ನೊಗವನ್ನೂ ಬೆನ್ನನ್ನು ಹೊಡೆದ ಕೋಲನ್ನೂ ಬಿಟ್ಟಿಹಿಡಿದವನ ದೊಣ್ಣೆಯನ್ನೂ ಮಿದ್ಯಾ ನಿನ ದಿನದಲ್ಲಿ ಮುರಿದಂತೆ ಮುರಿದುಬಿಟ್ಟಿದ್ದೀ.

ಸಂದರ್ಭದೊಂದಿಗೆ ಓದಿ · ಯೆಶಾಯ 9

2ಕತ್ತಲೆಯಲ್ಲಿ ನಡೆಯುವ ಜನರು ದೊಡ್ಡ ಬೆಳಕನ್ನು ಕಂಡರು; ಮರಣದ ನೆರಳಿನ ದೇಶದಲ್ಲಿ ವಾಸಿಸುವವರ ಮೇಲೆ ಬೆಳಕು ಪ್ರಕಾಶಿ ಸುತ್ತದೆ.

3ನೀನು ಜನಾಂಗವನ್ನು ವೃದ್ಧಿಗೊಳಿಸಿದ್ದೀ ಮತ್ತು ಸಂತೋಷವನ್ನು ಹೆಚ್ಚಿಸಿದ್ದೀ ಸುಗ್ಗಿಕಾಲದ ಸಂತೋಷ ದಂತೆಯೂ ಕೊಳ್ಳೆಯನ್ನು ಹಂಚಿಕೊಳ್ಳುವಾಗ ಉಲ್ಲಾ ಸಿಸುವ ಹಾಗೆಯೂ ನಿನ್ನ ಮುಂದೆ ಸಂತೋಷಿಸು ವರು.

4ಅವನ ನೊಗವನ್ನೂ ಬೆನ್ನನ್ನು ಹೊಡೆದ ಕೋಲನ್ನೂ ಬಿಟ್ಟಿಹಿಡಿದವನ ದೊಣ್ಣೆಯನ್ನೂ ಮಿದ್ಯಾ ನಿನ ದಿನದಲ್ಲಿ ಮುರಿದಂತೆ ಮುರಿದುಬಿಟ್ಟಿದ್ದೀ.

5ಯುದ್ಧವೀರರ ಪ್ರತಿಯುದ್ಧವು ಗಲಿಬಿಲಿಯ ಗದ್ದಲ ದಿಂದ ಕೂಡಿದ್ದಾಗಿಯೂ ವಸ್ತ್ರಗಳು ರಕ್ತದಲ್ಲಿ ಹೊರಳಾ ಡಿದವುಗಳಾಗಿಯೂ ಇರುತ್ತವೆ; ಆದರೆ ಇವು ಬೆಂಕಿಗೆ ಆಹುತಿಯಾಗಿ ಸುಟ್ಟುಹೋಗುವವು.

6ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನು ನಮಗೆ ಕೊಡಲ್ಪಟ್ಟಿದ್ದಾನೆ; ಆಡಳಿತವು ಆತನ ಬಾಹುವಿನ ಮೇಲಿರುವದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂದು ಆತನ ಹೆಸರು ಕರೆಯಲ್ಪಡುವದು.

ಯೆಶಾಯ 9 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी