ಗಿದ್ಯೋನನು ಯೊರ್ದನಿಗೆ ಬಂದು ಅದನ್ನು ದಾಟಿ ಅವನೂ ಅವನ ಸಂಗಡ ಇದ್ದ ಮುನ್ನೂರು ಜನರೂ ದಣಿದವರಾಗಿಯೂ ಹಿಂದಟ್ಟುವವರಾಗಿಯೂ ಇದ್ದರು.
2ಅವನು ಅವರಿಗೆನೀವು ಮಾಡಿದ್ದಕ್ಕೆ ಸಮಾನವಾಗಿ ನಾನೇನು ಮಾಡಿ ದೆನು? ಅಬೀಯೆಜೆರನ ದ್ರಾಕ್ಷೇ ಫಲ ಕೂಡಿಸುವ ದಕ್ಕಿಂತ ಎಫ್ರಾಯಾಮನ ದ್ರಾಕ್ಷೇ ಹಕ್ಕಲು ಉತ್ತಮ ವಲ್ಲವೇ?
3ದೇವರು ನಿಮ್ಮ ಕೈಯಲ್ಲಿ ಮಿದ್ಯಾನ್ಯರ ಪ್ರಧಾನರಾದ ಓರೇಬನ್ನೂ ಜೇಬನ್ನೂ ಒಪ್ಪಿಸಿ ಕೊಡ ಲಿಲ್ಲವೇ? ನೀವು ಮಾಡಿದ್ದಕ್ಕೆ ನಾನು ಮಾಡಿದ್ದು ಎಷ್ಟು ಅಂದನು. ಅವನು ಈ ಮಾತು ಹೇಳಿದಾಗ ಅವನ ವಿಷಯವಾಗಿ ಅವರ ಕೋಪವು ಶಾಂತವಾಯಿತು.
4ಗಿದ್ಯೋನನು ಯೊರ್ದನಿಗೆ ಬಂದು ಅದನ್ನು ದಾಟಿ ಅವನೂ ಅವನ ಸಂಗಡ ಇದ್ದ ಮುನ್ನೂರು ಜನರೂ ದಣಿದವರಾಗಿಯೂ ಹಿಂದಟ್ಟುವವರಾಗಿಯೂ ಇದ್ದರು.
5ಅವನು ಸುಖೋತಿನ ಮನುಷ್ಯರಿಗೆ--ದಯಮಾಡಿ ನನ್ನ ಕೂಡ ಇರುವ ಜನರಿಗೆ ಕೆಲವು ರೊಟ್ಟಿಗಳನ್ನು ಕೊಡಿರಿ. ಅವರು ದಣಿದಿದ್ದಾರೆ; ನಾನು ಮಿದ್ಯಾನ್ಯರ ಅರಸುಗಳಾದ ಜೆಬಹನನ್ನೂ ಚಲ್ಮುನ್ನನನ್ನೂ ಹಿಂದಟ್ಟು ತ್ತೇನೆ ಅಂದನು.
6ಆದರೆ ಸುಖೋತಿನ ಪ್ರಧಾನರು ಅವನಿಗೆ--ನಿನ್ನ ಸೈನ್ಯಕ್ಕೆ ನಾವು ರೊಟ್ಟಿ ಕೊಡುವಂತೆ ಜೆಬಹ ಚಲ್ಮುನ್ನರ ಕೈ ನಿನ್ನ ಕೈ ವಶವಾಗಿದೆಯೋ ಅಂದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ