ಯೆಹೋಶುವ 1:5

ಆದರೆ ನೀನು ಜೀವಿಸುವ ದಿವಸಗಳಲ್ಲೆಲ್ಲಾ ಯಾವನೂ ನಿನ್ನ ಮುಂದೆ ನಿಲ್ಲಲಾರನು. ನಾನು ಮೋಶೆಯ ಸಂಗಡ ಇದ್ದ ಹಾಗೆಯೇ ನಿನ್ನ ಸಂಗಡ ಇರುವೆನು. ನಾನು ನಿನ್ನನ್ನು ಕೈಬಿಡುವುದಿಲ್ಲ, ಇಲ್ಲವೆ ನಿನ್ನನ್ನು ತೊರೆಯುವದಿಲ್ಲ.

ಸಂದರ್ಭದೊಂದಿಗೆ ಓದಿ · ಯೆಹೋಶುವ 1

3ನಾನು ಮೋಶೆಗೆ ಹೇಳಿದ ಹಾಗೆ ನಿಮ್ಮ ಪಾದವು ತುಳಿಯುವ ಎಲ್ಲಾ ಸ್ಥಳವನ್ನು ನಿಮಗೆ ಕೊಟ್ಟೆನು.

4ಅರಣ್ಯವೂ ಈ ಲೆಬನೋನೂ ಮೊದಲುಗೊಂಡು ಯೂಫ್ರೇಟೀಸ್‌ ಮಹಾನದಿಯ ವರೆಗೆ ಇರುವ ಹಿತ್ತಿಯರ ದೇಶವೆಲ್ಲಾ ಸೂರ್ಯನು ಅಸ್ತಮಿಸುವ ಕಡೆಗೆ ಮಹಾಸಮುದ್ರದ ವರೆಗೂ ನಿಮ್ಮ ಮೇರೆಯಾಗಿರುವದು.

5ಆದರೆ ನೀನು ಜೀವಿಸುವ ದಿವಸಗಳಲ್ಲೆಲ್ಲಾ ಯಾವನೂ ನಿನ್ನ ಮುಂದೆ ನಿಲ್ಲಲಾರನು. ನಾನು ಮೋಶೆಯ ಸಂಗಡ ಇದ್ದ ಹಾಗೆಯೇ ನಿನ್ನ ಸಂಗಡ ಇರುವೆನು. ನಾನು ನಿನ್ನನ್ನು ಕೈಬಿಡುವುದಿಲ್ಲ, ಇಲ್ಲವೆ ನಿನ್ನನ್ನು ತೊರೆಯುವದಿಲ್ಲ.

6ಬಲವಾಗಿರು, ದೃಢವಾಗಿರು; ಈ ಜನರಿಗೆ ನಾನು ಅವರ ತಂದೆಗಳಿಗೆ ಕೊಡುವೆನೆಂದು ಆಣೆ ಇಟ್ಟ ದೇಶವನ್ನು ನೀನು ಬಾದ್ಯವಾಗಿ ಹಂಚಿಕೊಡುವಿ.

7ನನ್ನ ಸೇವಕನಾದ ಮೋಶೆಯು ನಿನಗೆ ಆಜ್ಞಾಪಿಸಿದ ನ್ಯಾಯ ಪ್ರಮಾಣವೆಲ್ಲಾದರ ಪ್ರಕಾರ ನೀನು ಕೈಕೊಂಡು ನಡೆ ಯುವ ಹಾಗೆ ಬಲವಾಗಿರು, ಬಹು ಧೈರ್ಯದಿಂದಿರು, ನೀನು ಹೋಗುವ ಸ್ಥಳದಲ್ಲೆಲ್ಲಾ ಸಫಲವಾಗುವ ಹಾಗೆ ಅದನ್ನು (ನ್ಯಾಯಪ್ರಮಾಣವನ್ನು) ಬಿಟ್ಟು ಬಲ ಕ್ಕಾದರೂ ಎಡಕ್ಕಾದರೂ ತಿರುಗಬೇಡ.

ಯೆಹೋಶುವ 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी