ಯಾಜಕಕಾಂಡ 26:43

ಅವರು ದೇಶದೊಳಗಿಂದ ಹೊರಡಿಸಲ್ಪಟ್ಟು ಅವರಿಲ್ಲದೆ ಹಾಳಾದ ವೇಳೆಯಲ್ಲಿ ಅದು ತನ್ನ ಸಬ್ಬತ್ತು ಗಳನ್ನು ಅನುಭವಿಸುವದು; ಅವರು ತಮ್ಮ ಅಕ್ರಮ ದಿಂದಾದ ಶಿಕ್ಷೆಗೆ ಒಪ್ಪಿಕೊಳ್ಳುವರು; ಅವರು ನನ್ನ ನ್ಯಾಯಗಳನ್ನು ಹೇಸಿ, ತಮ್ಮ ಹೃದಯಗಳಲ್ಲಿ ನನ್ನ ನಿಯಮಗಳನ್ನು ಅಸಹ್ಯಿಸಿದ್ದರಿಂದಲೇ.

ಸಂದರ್ಭದೊಂದಿಗೆ ಓದಿ · ಯಾಜಕಕಾಂಡ 26

41ನಾನೂ ಅವರಿಗೆ ವಿರೋಧವಾಗಿ ನಡೆದುಕೊಂಡು ತಮ್ಮ ಶತ್ರುಗಳ ದೇಶಕ್ಕೆ ಬರಮಾಡಿದ್ದನ್ನು ಅರಿಕೆಮಾಡಿ ಪರಿಛೇದನೆ ಇಲ್ಲದ ಅವರ ಹೃದಯವು ತಗ್ಗಿಸಲ್ಪಟ್ಟು ತಮ್ಮ ಅಕ್ರಮದಿಂದ ಉಂಟಾದ ಶಿಕ್ಷೆಗೆ ಅವರು ಒಪ್ಪಿಕೊಳ್ಳುವದಾದರೆ

42ನಾನು ಯಾಕೋಬ್‌ ಇಸಾಕ್‌ ಅಬ್ರಹಾಮ್‌ ಇವ ರಿಗೆ ಮಾಡಿದ ನನ್ನ ಒಡಂಬಡಿಕೆಯನ್ನೂ ಅವರ ದೇಶವನ್ನೂ ಜ್ಞಾಪಕಮಾಡಿಕೊಳ್ಳುವೆನು.

43ಅವರು ದೇಶದೊಳಗಿಂದ ಹೊರಡಿಸಲ್ಪಟ್ಟು ಅವರಿಲ್ಲದೆ ಹಾಳಾದ ವೇಳೆಯಲ್ಲಿ ಅದು ತನ್ನ ಸಬ್ಬತ್ತು ಗಳನ್ನು ಅನುಭವಿಸುವದು; ಅವರು ತಮ್ಮ ಅಕ್ರಮ ದಿಂದಾದ ಶಿಕ್ಷೆಗೆ ಒಪ್ಪಿಕೊಳ್ಳುವರು; ಅವರು ನನ್ನ ನ್ಯಾಯಗಳನ್ನು ಹೇಸಿ, ತಮ್ಮ ಹೃದಯಗಳಲ್ಲಿ ನನ್ನ ನಿಯಮಗಳನ್ನು ಅಸಹ್ಯಿಸಿದ್ದರಿಂದಲೇ.

44ಆದಾಗ್ಯೂ ಅವರು ತಮ್ಮ ಶತ್ರುಗಳ ದೇಶದಲ್ಲಿರುವಾಗ ಅವರನ್ನು ತಳ್ಳಿಬಿಡದೆಯೂ ಅಸಹ್ಯಿಸದೆಯೂ ಸಂಪೂರ್ಣವಾಗಿ ನಾಶಮಾಡದೆಯೂ ಅವರ ಸಂಗಡ ಇರುವ ನನ್ನ ಒಡಂಬಡಿಕೆಯನ್ನು ಮುರಿಯದೆಯೂ ಇರುವೆನು; ಅವರ ದೇವರಾಗಿರುವ ಕರ್ತನು ನಾನೇ.

45ನಾನು ಅವರಿಗೆ ದೇವರಾಗಿರುವದರಿಂದ ಜನಾಂಗಗಳ ಮುಂದೆ ಐಗುಪ್ತದೇಶದಿಂದ ಹೊರಗೆ ಬರಮಾಡಿದ ಅವರ ಪಿತೃಗಳ ಒಡಂಬಡಿಕೆಯನ್ನು ಅವರಿಗೊಸ್ಕರ ಜ್ಞಾಪಕ ಮಾಡಿಕೊಳ್ಳುವೆನು; ನಾನೇ ಕರ್ತನು.

ಯಾಜಕಕಾಂಡ 26 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी