ಯೆಶಾಯ 63:14

ಪಶುವು ತಗ್ಗಿಗೆ ಇಳಿ ಯುವ ಪ್ರಕಾರ, ಕರ್ತನ ಆತ್ಮನು ಅವರಿಗೆ ವಿಶ್ರಾಂತಿ ಕೊಟ್ಟನು; ಈ ಪ್ರಕಾರ ನೀನು ನಿನಗೆ ಮಹಿಮೆ ಯುಳ್ಳ ಹೆಸರನ್ನು ಉಂಟು ಮಾಡುವ ಹಾಗೆ, ನಿನ್ನ ಜನರನ್ನು ನಡಿಸಿದಿ.

ಸಂದರ್ಭದೊಂದಿಗೆ ಓದಿ · ಯೆಶಾಯ 63

12ಮೋಶೆಯ ಬಲಗೈಯ ಮುಖಾಂ ತರ, ತನ್ನ ಮಹಿಮೆಯುಳ್ಳ ತೋಳಿನಿಂದ ಅವರನ್ನು ನಡಿಸಿದವನೂ ತನಗೆ ನಿತ್ಯವಾದ ಹೆಸರನ್ನುಂಟು ಮಾಡುವ ಹಾಗೆ ಅವರ ಮುಂದೆ ನೀರುಗಳನ್ನು ಭೇದಿಸಿದವನು ಎಲ್ಲಿ?

13ಅಡವಿಯಲ್ಲಿ ಕುದುರೆಯಂತೆ ಅಗಾಧಗಳಲ್ಲಿ ಅವರನ್ನು ಎಡವದ ಹಾಗೆ ನಡಿಸಿ ದವನು ಎಲ್ಲಿ ಅಂದನು.

14ಪಶುವು ತಗ್ಗಿಗೆ ಇಳಿ ಯುವ ಪ್ರಕಾರ, ಕರ್ತನ ಆತ್ಮನು ಅವರಿಗೆ ವಿಶ್ರಾಂತಿ ಕೊಟ್ಟನು; ಈ ಪ್ರಕಾರ ನೀನು ನಿನಗೆ ಮಹಿಮೆ ಯುಳ್ಳ ಹೆಸರನ್ನು ಉಂಟು ಮಾಡುವ ಹಾಗೆ, ನಿನ್ನ ಜನರನ್ನು ನಡಿಸಿದಿ.

15ಆಕಾಶದಿಂದ, ನಿನ್ನ ಪರಿ ಶುದ್ಧ ಮಹಿಮೆಯ ನಿವಾಸದಿಂದ ದೃಷ್ಟಿಸಿನೋಡು; ನಿನ್ನ ಆಸಕ್ತಿಯೂ ನಿನ್ನ ಪರಾಕ್ರಮವೂ ನಿನ್ನ ಕರುಳುಗಳ ಘೋಷವೂ ನನ್ನ ವಿಷಯವಾದ ನಿನ್ನ ಕರುಣೆಗಳೂ ಎಲ್ಲಿ? ಬಿಗಿ ಹಿಡುಕೊಂಡಿದ್ದೀಯೋ?

16ಅಬ್ರಹಾಮನು ನಮ್ಮನ್ನು ತಿಳಿಯದಿದ್ದರೂ ಇಸ್ರಾಯೇಲನು ನಮ್ಮನ್ನು ಗುರುತಿಸದಿದ್ದರೂ ನಿಸ್ಸಂದೇಹವಾಗಿ ನೀನೇ ನಮ್ಮ ತಂದೆಯಾಗಿದ್ದೀ; ಕರ್ತನಾದ ನೀನೇ ನಮ್ಮ ತಂದೆಯು, ನಮ್ಮ ವಿಮೋಚಕನು; ನಿನ್ನ ಹೆಸರು ಸದಾಕಾಲವೂ ಇದೆ.

ಯೆಶಾಯ 63 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी