೨ ಕೊರಿಂಥದವರಿಗೆ 13:2

ನಾನು ಎರಡನೆಯ ಸಾರಿ ನಿಮ್ಮಲ್ಲಿದ್ದಾಗ--ನಾನು ತಿರಿಗಿ ಬಂದರೆ ನಿಮ್ಮನ್ನು ಶಿಕ್ಷಿಸದೆ ಬಿಡುವದಿಲ್ಲವೆಂದು ಹೇಗೆ ಹೇಳಿದೆನೋ ಹಾಗೆಯೇ ಈಗಲೂ ಪೂರ್ವ ಪಾಪಕೃತ್ಯಗಳನ್ನು ಇನ್ನೂ ನಡಿಸುತ್ತಿರುವವರಿಗೂ ಮಿಕ್ಕಾದವರೆಲ್ಲರಿಗೂ ನಾನು ಬರೆಯುತ್ತೇನೆ.

ಸಂದರ್ಭದೊಂದಿಗೆ ಓದಿ · ೨ ಕೊರಿಂಥದವರಿಗೆ 13

1ನಾನು ನಿಮ್ಮ ಬಳಿಗೆ ಬರುವದು ಇದು ಮೂರನೆಯ ಸಾರಿ. ಇಬ್ಬರು ಮೂವರ ಸಾಕ್ಷಿಗಳ ಬಾಯಿಂದ ಪ್ರತಿಯೊಂದು ಮಾತೂ ಸ್ಥಾಪಿತವಾಗಬೇಕು.

2ನಾನು ಎರಡನೆಯ ಸಾರಿ ನಿಮ್ಮಲ್ಲಿದ್ದಾಗ--ನಾನು ತಿರಿಗಿ ಬಂದರೆ ನಿಮ್ಮನ್ನು ಶಿಕ್ಷಿಸದೆ ಬಿಡುವದಿಲ್ಲವೆಂದು ಹೇಗೆ ಹೇಳಿದೆನೋ ಹಾಗೆಯೇ ಈಗಲೂ ಪೂರ್ವ ಪಾಪಕೃತ್ಯಗಳನ್ನು ಇನ್ನೂ ನಡಿಸುತ್ತಿರುವವರಿಗೂ ಮಿಕ್ಕಾದವರೆಲ್ಲರಿಗೂ ನಾನು ಬರೆಯುತ್ತೇನೆ.

3ಕ್ರಿಸ್ತನು ನನ್ನಲಿದ್ದುಕೊಂಡು ಮಾತನಾಡುತ್ತಾನೆಂಬದಕ್ಕೆ ನೀವು ಪ್ರಮಾಣವನ್ನು ಹುಡುಕುತ್ತೀರಾದದರಿಂದ ಆತನು ನಿಮ್ಮ ವಿಷಯದಲ್ಲಿ ಬಲಹೀನನಾಗಿರದೆ ನಿಮ್ಮಲ್ಲಿ ಬಲಿಷ್ಠನಾಗಿದ್ದಾನೆ.

4ಬಲಹೀನತೆಯ ಮೂಲಕ ಆತನು ಶಿಲುಬೆಗೆ ಹಾಕಲ್ಪಟ್ಟಿದ್ದಾಗ್ಯೂ ದೇವರ ಬಲದಿಂದ ಇನ್ನೂ ಬದುಕುತ್ತಾನೆ; ನಾವು ಸಹ ಆತನಲ್ಲಿ ಬಲಹೀನ ರಾಗಿದ್ದೇವೆ, ಆದರೂ ನಾವು ನಿಮಗೋಸ್ಕರವಾಗಿ ದೇವರ ಬಲದಿಂದ ಆತನೊಂದಿಗೆ ಬದುಕುವೆವು.

೨ ಕೊರಿಂಥದವರಿಗೆ 13 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी