ನ್ಯಾಯಸ್ಥಾಪಕರು 10:6

ಆದರೆ ಇಸ್ರಾಯೇಲ್‌ ಮಕ್ಕಳು ತಿರಿಗಿ ಕರ್ತನ ಮುಂದೆ ಕೆಟ್ಟತನಮಾಡಿ ಬಾಳನನ್ನೂ ಅಷ್ಟೋರೆತನ್ನೂ ಸಿರಿಯಾ ದೇಶದ ದೇವರುಗಳನ್ನೂ ಚೀದೋನಿನ ದೇವರುಗಳನ್ನೂ ಮೋವಾಬಿನ ದೇವರುಗಳನ್ನೂ ಅಮ್ಮೋನನ ಮಕ್ಕಳ ದೇವರುಗಳನ್ನೂ ಫಿಲಿಷ್ಟಿಯರ ದೇವರುಗಳನ್ನೂ ಸೇವಿಸುವವರಾಗಿ ಕರ್ತನನ್ನು ಸೇವಿ ಸದೆ ಆತನನ್ನು ಬಿಟ್ಟು ಹೋದರು.

ಸಂದರ್ಭದೊಂದಿಗೆ ಓದಿ · ನ್ಯಾಯಸ್ಥಾಪಕರು 10

4ಅವನಿಗೆ ಮೂವತ್ತು ಕತ್ತೇಮರಿಗಳ ಮೇಲೆ ಏರುವ ಮೂವತ್ತು ಮಂದಿ ಕುಮಾರರು ಇದ್ದರು. ಇವರಿಗೆ ಗಿಲ್ಯಾದ್‌ ದೇಶದಲ್ಲಿ ಮೂವತ್ತು ಪಟ್ಟಣಗಳಿದ್ದವು; ಅವುಗಳಿಗೆ ಈ ದಿನದ ವರೆಗೂ ಹವೋತ್ಯಾಯಾರೆಂಬ ಹೆಸರಿದೆ.

5ಯಾಯಾ ರನು ಸತ್ತು ಕಾಮೋನಿನಲ್ಲಿ ಹೂಣಲ್ಪಟ್ಟನು.

6ಆದರೆ ಇಸ್ರಾಯೇಲ್‌ ಮಕ್ಕಳು ತಿರಿಗಿ ಕರ್ತನ ಮುಂದೆ ಕೆಟ್ಟತನಮಾಡಿ ಬಾಳನನ್ನೂ ಅಷ್ಟೋರೆತನ್ನೂ ಸಿರಿಯಾ ದೇಶದ ದೇವರುಗಳನ್ನೂ ಚೀದೋನಿನ ದೇವರುಗಳನ್ನೂ ಮೋವಾಬಿನ ದೇವರುಗಳನ್ನೂ ಅಮ್ಮೋನನ ಮಕ್ಕಳ ದೇವರುಗಳನ್ನೂ ಫಿಲಿಷ್ಟಿಯರ ದೇವರುಗಳನ್ನೂ ಸೇವಿಸುವವರಾಗಿ ಕರ್ತನನ್ನು ಸೇವಿ ಸದೆ ಆತನನ್ನು ಬಿಟ್ಟು ಹೋದರು.

7ಆಗ ಕರ್ತನು ಇಸ್ರಾಯೇಲಿಗೆ ವಿರೋಧವಾಗಿ ಕೋಪಗೊಂಡು ಅವ ರನ್ನು ಫಿಲಿಷ್ಟಿಯರ ಕೈಗೂ ಅಮ್ಮೋನನ ಮಕ್ಕಳ ಕೈಗೂ ಮಾರಿಬಿಟ್ಟನು.

8ಆ ವರುಷ ಮೊದಲುಗೊಂಡ ಅವರು ಹದಿನೆಂಟು ವರುಷ ಯೊರ್ದನಿಗೆ ಆಚೆ ಗಿಲ್ಯಾದಿನಲ್ಲಿ ಅಮೋರಿಯರ ದೇಶದಲ್ಲಿರುವ ಇಸ್ರಾಯೇಲ್‌ ಮಕ್ಕಳ ನ್ನೆಲ್ಲಾ ಬಾಧಿಸಿ ಕುಂದಿಸಿದರು.

ನ್ಯಾಯಸ್ಥಾಪಕರು 10 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी