೨ ಸಮುವೇಲನು 14:21

ಆದದರಿಂದ ಅರಸನು ಯೋವಾಬನಿಗೆಇಗೋ, ನಾನು ಈ ಕಾರ್ಯವನ್ನು ಮಾಡಿದೆನು; ನೀನು ಹೋಗಿ ಯೌವನಸ್ಥನಾದ ಅಬ್ಷಾಲೋಮ ನನ್ನು ತಿರಿಗಿ ಕರಕೊಂಡು ಬಾ ಅಂದನು.

ಸಂದರ್ಭದೊಂದಿಗೆ ಓದಿ · ೨ ಸಮುವೇಲನು 14

19ಅದಕ್ಕೆ ಅರಸನು--ಇದೆಲ್ಲಾದರಲ್ಲಿ ಯೋವಾಬನ ಕೈ ನಿನ್ನ ಸಂಗಡ ಉಂಟಲ್ಲವೋ ಅಂದನು. ಆ ಸ್ತ್ರೀಯು ಪ್ರತ್ಯುತ್ತರವಾಗಿ--ನಿನ್ನ ಪ್ರಾಣದ ಜೀವದಾಣೆ, ಅರಸ ನಾದ ನನ್ನ ಒಡೆಯನೇ, ನೀನು ಹೇಳುವವುಗಳಲ್ಲಿ ಒಂದನ್ನಾದರೂ ಯಾವನೂ ಎಡಗಡೆಗಾದರೂ ಬಲ ಗಡೆಗಾದರೂ ತಿರಿಗಿಸಕೂಡದು. ನಿನ್ನ ಸೇವಕನಾದ ಯೋವಾಬನು ನನಗೆ ಆಜ್ಞಾಪಿಸಿ ಈ ಎಲ್ಲಾ ಮಾತು ಗಳನ್ನು ನಿನ್ನ ಸೇವಕಳಿಗೆ ಹೇಳಿಕೊಟ್ಟನು.

20ಈ ಮಾತಿನ ರೂಪವನ್ನು ತಿರುಗಿಸುವದಕ್ಕೆ ನಿನ್ನ ಸೇವಕನಾದ ಯೋವಾಬನು ಇದನ್ನು ಮಾಡಿದ್ದಾನೆ. ಆದರೆ ಭೂಮಿ ಯಲ್ಲಿ ನಡಿಯುವದನ್ನೆಲ್ಲಾ ತಿಳಿಯುವದಕ್ಕೆ ದೇವ ದೂತನ ಜ್ಞಾನದ ಹಾಗೆಯೇ ನನ್ನ ಒಡೆಯನು ಜ್ಞಾನವುಳ್ಳವನಾಗಿದ್ದಾನೆ ಅಂದಳು.

21ಆದದರಿಂದ ಅರಸನು ಯೋವಾಬನಿಗೆಇಗೋ, ನಾನು ಈ ಕಾರ್ಯವನ್ನು ಮಾಡಿದೆನು; ನೀನು ಹೋಗಿ ಯೌವನಸ್ಥನಾದ ಅಬ್ಷಾಲೋಮ ನನ್ನು ತಿರಿಗಿ ಕರಕೊಂಡು ಬಾ ಅಂದನು.

22ಆಗ ಯೋವಾಬನು ನೆಲಕ್ಕೆ ಬಿದ್ದು ಬೊಗ್ಗಿಕೊಂಡು ಅರಸ ನಿಗೆ ವಂದಿಸಿದನು. ಯೋವಾಬನು--ಅರಸನು ತನ್ನ ಸೇವಕನ ಮಾತಿನ ಪ್ರಕಾರ ಮಾಡಿದ್ದರಿಂದ ನನ್ನ ಒಡೆಯನಾದ ಅರಸನೇ, ನಿನ್ನ ದೃಷ್ಟಿಯಲ್ಲಿ ನನಗೆ ದಯೆದೊರಕಿತೆಂಬದು ಈ ಹೊತ್ತು ನಿನ್ನ ಸೇವಕನಿಗೆ ತಿಳಿಯಿತು ಅಂದನು.

23ಹಾಗೆಯೇ ಯೋವಾಬನು ಎದ್ದು ಗೆಷೂರಿಗೆ ಹೋಗಿ ಅಬ್ಷಾಲೋಮನನ್ನು ಯೆರೂಸಲೇಮಿಗೆ ಕರಕೊಂಡು ಬಂದನು.

೨ ಸಮುವೇಲನು 14 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी