ಪ್ರಸಂಗಿ 4:10

ಒಬ್ಬನು ಬಿದ್ದರೆ ಇನ್ನೊಬ್ಬನು ತನ್ನ ಸಂಗಡಿಗನನ್ನು ಎತ್ತುವನು; ಅವನು ಒಬ್ಬೊಂಟಿಗನಾಗಿ ಬಿದ್ದರೆ ಅಯ್ಯೋ! ಅವನಿಗೆ ಸಹಾಯ ಮಾಡುವದಕ್ಕೆ ಇನ್ನೊಬ್ಬ ನಿಲ್ಲ.

ಸಂದರ್ಭದೊಂದಿಗೆ ಓದಿ · ಪ್ರಸಂಗಿ 4

8ಎರಡನೆಯವನಿಲ್ಲದ ಒಬ್ಬೊಂಟಿಗನು ಒಬ್ಬನಿದ್ದಾನೆ; ಹೌದು, ಅವನಿಗೆ ಮಗುವಾಗಲೀ ಸಹೋದರನಾಗಲೀ ಇಲ್ಲ; ಆದರೂ ಅವನ ಪ್ರಯಾಸಕ್ಕೆ ಕೊನೆಯಿಲ್ಲ. ಅಲ್ಲದೆ ಐಶ್ವರ್ಯ ದಿಂದ ಅವನ ಕಣ್ಣು ತೃಪ್ತಿಹೊಂದದು; ಮಾತ್ರವಲ್ಲದೆ ಅವನು--ನಾನು ಯಾರಿಗೋಸ್ಕರ ಕಷ್ಟಪಟ್ಟು ಪ್ರಾಣ ವನ್ನು ಅದಕ್ಕೆ ಸುಖವಿಲ್ಲದ ಹಾಗೆ ಕೊರೆತೆಪಡಿಸು ತ್ತೇನೆ; ಎಂದು ಅವನು ಅಂದುಕೊಳ್ಳುವನು. ಇದು ಕೂಡ ವ್ಯರ್ಥವೇ; ಹೌದು, ವ್ಯಥೆಯಿಂದಾದ ಪ್ರಯಾಸವೇ.

9ಒಬ್ಬನಿಗಿಂತ ಇಬ್ಬರು ಲೇಸು; ತಮ್ಮ ಪ್ರಯಾಸಕ್ಕೆ ಅವರಿಗೆ ಒಳ್ಳೆಯ ಪ್ರತಿಫಲವಿದೆ.

10ಒಬ್ಬನು ಬಿದ್ದರೆ ಇನ್ನೊಬ್ಬನು ತನ್ನ ಸಂಗಡಿಗನನ್ನು ಎತ್ತುವನು; ಅವನು ಒಬ್ಬೊಂಟಿಗನಾಗಿ ಬಿದ್ದರೆ ಅಯ್ಯೋ! ಅವನಿಗೆ ಸಹಾಯ ಮಾಡುವದಕ್ಕೆ ಇನ್ನೊಬ್ಬ ನಿಲ್ಲ.

11ತಿರುಗಿ ಇಬ್ಬರು ಜೊತೆಯಲ್ಲಿ ಮಲಗಿಕೊಂಡರೆ ಅವರಿಗೆ ಬೆಚ್ಚಗಾಗುತ್ತದೆ; ಒಬ್ಬನು ಹೇಗೆ ಬೆಚ್ಚಗಾಗಿ ರುತ್ತಾನೆ?

12ಅವನನ್ನು ಒಬ್ಬನು ಜಯಿಸಿದರೆ ಇಬ್ಬರು ಅವನನ್ನು ಎದುರಿಸುವರು; ಮೂರು ಹುರಿಯ ಹಗ್ಗವು ಬೇಗನೆ ಕಿತ್ತುಹೋಗುವದಿಲ್ಲ.

ಪ್ರಸಂಗಿ 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी