ನಿಮ್ಮಲ್ಲಿ ಮುಖ್ಯಸ್ಥನಾಗಬೇಕೆಂದಿರುವವನು ಎಲ್ಲರಿಗೆ ಸೇವಕನಾಗಿರಬೇಕು.
42ಆದರೆ ಯೇಸು ಅವರನ್ನು ತನ್ನ ಹತ್ತಿರಕ್ಕೆ ಕರೆದು ಅವರಿಗೆ--ಅನ್ಯಜನಗಳನ್ನು ಆಳುವದಕ್ಕೆ ನೇಮಿಸಲ್ಪ ಟ್ಟವರು ಅವರ ಮೇಲೆ ದೊರೆತನ ಮಾಡುತ್ತಾರೆ; ಮತ್ತು ಅವರಲ್ಲಿ ದೊಡ್ಡ ವರು ಅವರ ಮೇಲೆ ಅಧಿಕಾರ ಮಾಡುತ್ತಾರೆಂದು ನೀವು ಬಲ್ಲಿರಿ.
43ಆದರೆ ನಿಮ್ಮೊಳಗೆ ಹಾಗಿರಬಾರದು; ಮತ್ತು ನಿಮ್ಮೊಳಗೆ ದೊಡ್ಡವನಾಗಿರ ಬೇಕೆಂದಿರುವವನು ನಿಮ್ಮ ಸೇವಕನಾಗಿರಬೇಕು.
44ನಿಮ್ಮಲ್ಲಿ ಮುಖ್ಯಸ್ಥನಾಗಬೇಕೆಂದಿರುವವನು ಎಲ್ಲರಿಗೆ ಸೇವಕನಾಗಿರಬೇಕು.
45ಯಾಕಂದರೆ ಮನುಷ್ಯಕು ಮಾರನು ಸಹ ಸೇವೆ ಮಾಡಿಸಿಕೊಳ್ಳುವದಕ್ಕಾಗಿ ಅಲ್ಲ, ಆದರೆ ಸೇವೆ ಮಾಡುವದಕ್ಕೂ ತನ್ನ ಪ್ರಾಣವನ್ನು ಅನೇಕರಿಗೋಸ್ಕರ ಈಡುಕೊಡುವದಕ್ಕೂ ಬಂದನು ಎಂದು ಹೇಳಿದನು.
46ತರುವಾಯ ಅವರು ಯೆರಿಕೋವಿಗೆ ಬಂದರು; ಆತನು ತನ್ನ ಶಿಷ್ಯರೊಡನೆಯೂ ಬಹುಸಂಖ್ಯೆಯ ಜನರೊಡನೆಯೂ ಯೆರಿಕೋವಿನಿಂದ ಹೊರಟಾಗ ತಿಮಾಯನ ಮಗನಾದ ಕುರುಡ ಬಾರ್ತಿಮಾಯನು ಹೆದ್ದಾರಿಯ ಬದಿಯಲ್ಲಿ ಕೂತುಕೊಂಡು ಭಿಕ್ಷೆಬೇಡು ತ್ತಿದ್ದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ