ಆಗ ಫಿಲಿಷ್ಟಿಯರು ಬಂದು ರೆಫಾಯಾಮ್ ತಗ್ಗಿನಲ್ಲಿ ಇಳಿದುಕೊಂಡರು.
7ಯಾಫೀಯನು, ಎಲೀಷಾಮನು, ಬೆಲ್ಯಾದನು, ಎಲೀಫೆಲೆಟನು.
8ದಾವೀದನು ಸಮಸ್ತ ಇಸ್ರಾಯೇಲಿನ ಮೇಲೆ ಅರಸನಾಗಿ ಅಭಿಷೇಕಿಸಲ್ಪಟ್ಟಿದ್ದಾನೆಂದು ಫಿಲಿಷ್ಟಿಯರು ಕೇಳಿದಾಗ ಫಿಲಿಷ್ಟಿಯರೆಲ್ಲರು ದಾವೀದನನ್ನು ಹುಡು ಕಲು ಹೋದರು. ದಾವೀದನು ಅದನ್ನು ಕೇಳಿ ಅವರಿಗೆ ದುರಾಗಿ ಹೊರಟನು.
9ಆಗ ಫಿಲಿಷ್ಟಿಯರು ಬಂದು ರೆಫಾಯಾಮ್ ತಗ್ಗಿನಲ್ಲಿ ಇಳಿದುಕೊಂಡರು.
10ದಾವೀ ದನು--ನಾನು ಫಿಲಿಷ್ಟಿಯರಿಗೆ ವಿರೋಧವಾಗಿ ಹೋಗ ಬೇಕೋ? ಅವರನ್ನು ನನ್ನ ಕೈಯಲ್ಲಿ ಒಪ್ಪಿಸಿ ಕೊಡು ವಿಯೋ ಎಂದು ದೇವರನ್ನು ವಿಚಾರಿಸಿದನು. ಕರ್ತನು ಅವನಿಗೆ--ಹೋಗು; ನಾನು ಅವರನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡುವೆನು ಅಂದನು.
11ಹಾಗೆಯೇ ಅವರು ಬಾಳ್ಪೆರಾಚೀಮಿಗೆ ಬಂದ ಮೇಲೆ ದಾವೀದನು ಅಲ್ಲಿ ಅವರನ್ನು ಸಂಹರಿಸಿದನು. ಆಗ ದಾವೀದನು--ನೀರು ಕೊಚ್ಚಿಕೊಂಡು ಹೋಗುವ ಹಾಗೆ ದೇವರು ನನ್ನ ಕೈಯಿಂದ ನನ್ನ ಶತ್ರುಗಳನ್ನು ನಾಶಮಾಡಿದ್ದಾನೆ ಅಂದನು. ಆದಕಾರಣ ಆ ಸ್ಥಳಕ್ಕೆ ಬಾಳ್ಪೆರಾಚೀಮು ಎಂದು ಹೆಸರಿಟ್ಟನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ