ಆದರೆ ನೊವೊಮಿಯ ಗಂಡನಾದ ಎಲೀಮೆಲೆಕನು ಸತ್ತು ಹೋದನು; ಆಕೆಯೂ ಆಕೆಯ ಇಬ್ಬರು ಕುಮಾರರೂ ಉಳಿದರು.
1ನ್ಯಾಯಾಧಿಪತಿಗಳು ಆಳುತ್ತಿದ್ದ ಆ ದಿನಗಳಲ್ಲಿ ದೇಶದೊಳಗೆ ಬರ ಉಂಟಾ ಗಿದ್ದಾಗ ಆದದ್ದೇನಂದರೆ, ಯೆಹೂದದ ಬೇತ್ಲೆ ಹೇಮಿನವನಾದ ಒಬ್ಬ ಮನುಷ್ಯನು ತನ್ನ ಹೆಂಡ ತಿಯ ಮತ್ತು ತನ್ನ ಇಬ್ಬರು ಕುಮಾರರೊಂದಿಗೆ ಮೋವಾಬ್ ದೇಶದಲ್ಲಿ ವಾಸಮಾಡಬೇಕೆಂದು ಹೋದನು.
2ಆ ಮನುಷ್ಯನ ಹೆಸರು ಎಲೀಮೆಲೆ ಕನು; ಅವನ ಹೆಂಡತಿಯ ಹೆಸರು ನೊವೊಮಿ; ಅವನ ಕುಮಾರ ರಲ್ಲಿ ಒಬ್ಬನ ಹೆಸರು ಮಹ್ಲೋ ನನು, ಮತ್ತೊಬ್ಬನ ಹೆಸರು ಕಿಲ್ಯೋನನು. ಇವರು ಎಫ್ರಾತ್ಯರಾದ ಯೆಹೂದದ ಬೇತ್ಲೆಹೇಮಿನವ ರಾಗಿದ್ದರು. ಇವರು ಮೋವಾಬ್ ದೇಶಕ್ಕೆ ಬಂದು, ಅಲ್ಲಿ ವಾಸವಾಗಿದ್ದರು.
3ಆದರೆ ನೊವೊಮಿಯ ಗಂಡನಾದ ಎಲೀಮೆಲೆಕನು ಸತ್ತು ಹೋದನು; ಆಕೆಯೂ ಆಕೆಯ ಇಬ್ಬರು ಕುಮಾರರೂ ಉಳಿದರು.
4ಇವರು ಒರ್ಫಾ ರೂತ್ ಎಂಬ ಹೆಸರುಗಳುಳ್ಳ ಮೋವಾಬ್ ದೇಶದ ಸ್ತ್ರೀಯರನ್ನು ತಮಗೆ ಹೆಂಡತಿ ಯರನ್ನಾಗಿ ತಕ್ಕೊಂಡು ಸುಮಾರು ಹತ್ತು ವರುಷ ಅಲ್ಲಿ ವಾಸವಾಗಿದ್ದರು.
5ಮಹ್ಲೋನ ಕಿಲ್ಯೋನ ಇಬ್ಬರೂ ಸತ್ತುಹೋದರು. ಆ ಸ್ತ್ರೀಯು ತನ್ನ ಇಬ್ಬರು ಕುಮಾರರನ್ನೂ ತನ್ನ ಗಂಡನನ್ನೂ ಕಳೆದುಕೊಂಡು ಒಬ್ಬಳೇ ಉಳಿದಳು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ