೧ ಪೂರ್ವಕಾಲವೃತ್ತಾಂತ 21:16

ಆಗ ದಾವೀದನು ತನ್ನ ಕಣ್ಣುಗಳನ್ನೆತ್ತಿ ಭೂಮಿಗೂ ಆಕಾಶಕ್ಕೂ ಮಧ್ಯದಲ್ಲಿ ನಿಂತಿರುವ ಕರ್ತನ ದೂತನನ್ನು ಕಂಡನು; ಅವನ ಕೈಯಲ್ಲಿ ಯೆರೂಸ ಲೇಮಿನ ಮೇಲೆ ಚಾಚಿದ್ದ ಬಿಚ್ಚುಕತ್ತಿ ಇತ್ತು. ಆಗ ದಾವೀದನೂ ಇಸ್ರಾಯೇಲಿನ ಹಿರಿಯರೂ ಗೋಣೀ ತಟ್ಟುಗಳಿಂದ ಮುಚ್ಚಿಕೊಂಡವರಾಗಿ ಮೋರೆ ಕೆಳಗಾಗಿ ಬಿದ್ದರು.

ಸಂದರ್ಭದೊಂದಿಗೆ ಓದಿ · ೧ ಪೂರ್ವಕಾಲವೃತ್ತಾಂತ 21

14ಹಾಗೆಯೇ ಕರ್ತನು ಇಸ್ರಾಯೇಲಿನ ಮೇಲೆ ವ್ಯಾಧಿಯನ್ನು ಕಳುಹಿಸಿದನು; ಆಗ ಇಸ್ರಾಯೇಲಿನಲ್ಲಿ ಎಪ್ಪತ್ತು ಸಾವಿರ ಜನರು ಸತ್ತುಹೋದರು.

15ಇದ ಲ್ಲದೆ ಯೆರೂಸಲೇಮನ್ನು ನಾಶಮಾಡುವದಕ್ಕೆ ದೇವರು ದೂತನನ್ನು ಕಳುಹಿಸಿದನು. ಅವನು ನಾಶಮಾಡು ವದನ್ನು ಕರ್ತನು ನೋಡಿ ಆ ಕೇಡಿಗೋಸ್ಕರ ಪಶ್ಚಾ ತ್ತಾಪಪಟ್ಟು ನಾಶಮಾಡುವ ದೂತನಿಗೆ--ಸಾಕು; ನಿನ್ನ ಕೈಯನ್ನು ಹಿಂದೆಗೆ ಅಂದನು. ಆದರೆ ಕರ್ತನ ದೂತನು ಯೆಬೂಸಿಯನಾದ ಒರ್ನಾನನ ಕಣದ ಬಳಿಯಲ್ಲಿ ನಿಂತಿದ್ದನು.

16ಆಗ ದಾವೀದನು ತನ್ನ ಕಣ್ಣುಗಳನ್ನೆತ್ತಿ ಭೂಮಿಗೂ ಆಕಾಶಕ್ಕೂ ಮಧ್ಯದಲ್ಲಿ ನಿಂತಿರುವ ಕರ್ತನ ದೂತನನ್ನು ಕಂಡನು; ಅವನ ಕೈಯಲ್ಲಿ ಯೆರೂಸ ಲೇಮಿನ ಮೇಲೆ ಚಾಚಿದ್ದ ಬಿಚ್ಚುಕತ್ತಿ ಇತ್ತು. ಆಗ ದಾವೀದನೂ ಇಸ್ರಾಯೇಲಿನ ಹಿರಿಯರೂ ಗೋಣೀ ತಟ್ಟುಗಳಿಂದ ಮುಚ್ಚಿಕೊಂಡವರಾಗಿ ಮೋರೆ ಕೆಳಗಾಗಿ ಬಿದ್ದರು.

17ದಾವೀದನು ದೇವರಿಗೆ--ಜನರನ್ನು ಲೆಕ್ಕ ಮಾಡಲು ಆಜ್ಞಾಪಿಸಿದವನು ನಾನಲ್ಲವೋ? ನಾನೇ ಪಾಪವನ್ನು ಮಾಡಿ ಈ ಕೆಟ್ಟದ್ದನು ಮಾಡಿದ್ದೇನೆ. ಆದರೆ ಕುರಿಗಳಾದ ಇವರು ಮಾಡಿದ್ದೇನು? ನನ್ನ ದೇವರಾದ ಕರ್ತನೇ, ದಯದಿಂದ ನಿನ್ನ ಕೈ ನನ್ನ ಮೇಲೆಯೂ ನನ್ನ ತಂದೆಯ ಮನೆಯ ಮೇಲೆಯೂ ಇರಲಿ. ಆದರೆ ನಿನ್ನ ಜನರು ಬಾಧೆಪಡುವ ಹಾಗೆ ಅವರ ಮೇಲೆ ಬೇಡ ಅಂದನು.

18ಆಗ ಕರ್ತನ ದೂತನು ಗಾದನಿಗೆ--ದಾವೀದನು ಹೋಗಿ ಯೆಬೂಸಿಯನಾದ ಒರ್ನಾನನ ಕಣದಲ್ಲಿ ಕರ್ತನಿಗೆ ಬಲಿಪೀಠವನ್ನು ಕಟ್ಟುವ ಹಾಗೆ ದಾವೀದನಿಗೆ ಹೇಳು ಅಂದನು.

೧ ಪೂರ್ವಕಾಲವೃತ್ತಾಂತ 21 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी