ಯಾಜಕಕಾಂಡ 20:24

ನಾನು ನಿಮಗೆ ಹೇಳಿದ್ದೇನಂದರೆ--ನೀವು ಅವರ ದೇಶವನ್ನು ಸ್ವಾಧೀನ ಪಡಿಸಿಕೊಳ್ಳುವಿರಿ. ಹಾಲೂ ಜೇನೂ ಹರಿಯುವ ಆ ದೇಶವನ್ನು ನೀವು ಸ್ವಾಧೀನಪಡಿಸಿಕೊಳ್ಳುವಂತೆ ನಾನು ಅದನ್ನು ನಿಮಗೆ ಕೊಡುತ್ತೇನೆ. ನಿಮ್ಮನ್ನು ಬೇರೆ ಜನರಿಂದ ಪ್ರತ್ಯೇಕಪಡಿಸಿದಂಥ ನಿಮ್ಮ ದೇವರಾಗಿರುವ ಕರ್ತನು ನಾನೇ.

ಸಂದರ್ಭದೊಂದಿಗೆ ಓದಿ · ಯಾಜಕಕಾಂಡ 20

22ಆದದರಿಂದ ನೀವು ನನ್ನ ಎಲ್ಲಾ ನಿಯಮಗಳನ್ನೂ ನ್ಯಾಯಗಳನ್ನೂ ಕೈಕೊಂಡು ಅವುಗಳನ್ನು ಮಾಡಬೇಕು; ಹೀಗಿದ್ದರೆ ನೀವು ವಾಸಿಸುವದಕ್ಕೆ ನಾನು ನಿಮ್ಮನ್ನು ತರುವ ಆ ದೇಶವು ನಿಮ್ಮನ್ನು ಕಾರಿಬಿಡುವದಿಲ್ಲ.

23ನಾನು ನಿಮ್ಮೆದುರಿನಲ್ಲಿಯೇ ಹೊರಗೆ ಹಾಕಿದ ಜನಾಂಗಗಳಂತೆ ನೀವು ನಡೆಯಬಾರದು; ಅವರು ಇಂಥವುಗಳನ್ನೆಲ್ಲಾ ಮಾಡಿದ್ದಾರೆ; ಆದಕಾರಣ ನಾನು ಅವರನ್ನು ಅಸಹ್ಯಿಸಿಕೊಂಡಿದ್ದೇನೆ.

24ನಾನು ನಿಮಗೆ ಹೇಳಿದ್ದೇನಂದರೆ--ನೀವು ಅವರ ದೇಶವನ್ನು ಸ್ವಾಧೀನ ಪಡಿಸಿಕೊಳ್ಳುವಿರಿ. ಹಾಲೂ ಜೇನೂ ಹರಿಯುವ ಆ ದೇಶವನ್ನು ನೀವು ಸ್ವಾಧೀನಪಡಿಸಿಕೊಳ್ಳುವಂತೆ ನಾನು ಅದನ್ನು ನಿಮಗೆ ಕೊಡುತ್ತೇನೆ. ನಿಮ್ಮನ್ನು ಬೇರೆ ಜನರಿಂದ ಪ್ರತ್ಯೇಕಪಡಿಸಿದಂಥ ನಿಮ್ಮ ದೇವರಾಗಿರುವ ಕರ್ತನು ನಾನೇ.

25ಆದದರಿಂದ ನೀವು ಶುದ್ಧವಾದ ಮತ್ತು ಅಶುದ್ಧವಾದ ಪಶುಗಳ ಮಧ್ಯದಲ್ಲಿಯೂ ಅಶುದ್ಧವಾದ ಮತ್ತು ಶುದ್ಧವಾದ ಪಕ್ಷಿಗಳ ಮಧ್ಯದಲ್ಲಿಯೂ ವ್ಯತ್ಯಾಸ ಮಾಡಬೇಕು. ಇದಲ್ಲದೆ ನಾನು ನಿಮ್ಮಿಂದ ಪ್ರತ್ಯೇಕಿಸಿದ ಅಶುದ್ಧವಾದ ಪಶುಗಳಿಂದಲೂ ಪಕ್ಷಿಗಳಿಂದಲೂ ಭೂಮಿಯ ಮೇಲೆ ಚಲಿಸುವ ಯಾವ ತರವಾದ ಜೀವಿಯಿಂದಲೂ ನೀವು ನಿಮ್ಮನ್ನು ಅಶುದ್ಧಮಾಡಿ ಕೊಳ್ಳಬಾರದು.

26ನೀವು ನನ್ನವರಾಗಿರುವಂತೆ ನಿಮ್ಮನ್ನು ಬೇರೆ ಜನರಿಂದ ಪ್ರತ್ಯೇಕಿಸಿದ್ದ ಕರ್ತನಾದ ನಾನು ಪರಿಶುದ್ಧನಾಗಿರುವದರಿಂದ ನೀವು ನನಗೆ ಪರಿಶುದ್ಧ ರಾಗಿರಬೇಕು.

ಯಾಜಕಕಾಂಡ 20 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी