ನಾವು ಆತನ ದೇಹದ ಅಂಗಗಳೂ ಮಾಂಸವೂ ಎಲುಬುಗಳೂ ಆಗಿದ್ದೇವೆ.
28ಹಾಗೆಯೇ ಪುರುಷರು ಸಹ ಸ್ವಂತ ಶರೀರವನ್ನು ಪ್ರೀತಿಸಿಕೊಳ್ಳುವ ಪ್ರಕಾರವೇ ತಮ್ಮ ಹೆಂಡತಿಯರನ್ನು ಪ್ರೀತಿಸುವ ಹಂಗಿನವರಾಗಿದ್ದಾರೆ. ತನ್ನ ಹೆಂಡತಿಯನ್ನು ಪ್ರೀತಿಸುವವನು ತನ್ನನ್ನೆ ಪ್ರೀತಿಸಿಕೊಳ್ಳುವನಾಗಿದ್ದಾನೆ.
29ಯಾರೂ ಎಂದೂ ಸ್ವಶರೀರವನ್ನು ಹಗೆಮಾಡಿದ್ದಿಲ್ಲ. ಆದರೆ ಅದನ್ನು ಪೋಷಿಸಿ ಸಂರಕ್ಷಿಸುವ ಪ್ರಕಾರ ಕರ್ತನು ಸಭೆಯನ್ನು ಪೋಷಿಸಿ ಸಂರಕ್ಷಿಸುವಾತನಾಗಿದ್ದಾನೆ.
30ನಾವು ಆತನ ದೇಹದ ಅಂಗಗಳೂ ಮಾಂಸವೂ ಎಲುಬುಗಳೂ ಆಗಿದ್ದೇವೆ.
31ಇದರ ನಿಮಿತ್ತದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿ ಯನ್ನು ಸೇರಿಕೊಳ್ಳುವನು; ಅವರಿಬ್ಬರೂ ಒಂದೇ ಶರೀರವಾಗಿರುವರು.
32ಇದೊಂದು ದೊಡ್ಡ ಮರ್ಮವೇ; ಆದರೆ ನಾನು ಕ್ರಿಸ್ತನ ವಿಷಯವಾಗಿಯೂ ಸಭೆಯ ವಿಷಯವಾಗಿಯೂ ಮಾತನಾಡುತ್ತೇನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ