೧ ಅರಸುಗಳು 18:24

ಆಗ ನೀವು ನಿಮ್ಮ ದೇವರುಗಳ ಹೆಸರನ್ನು ಕರೆಯಿರಿ; ನಾನು ಕರ್ತನ ಹೆಸರನ್ನು ಹೇಳಿ ಪ್ರಾರ್ಥಿಸುವೆನು. ಆಗ ಬೆಂಕಿಯಿಂದ ಪ್ರತ್ಯುತ್ತರ ಕೊಡುವ ದೇವರು ತಾನೇ ದೇವರಾಗಿ ರುವನು ಅಂದನು.

ಸಂದರ್ಭದೊಂದಿಗೆ ಓದಿ · ೧ ಅರಸುಗಳು 18

22ಆಗ ಎಲೀಯನು ಜನರಿಗೆ--ಕರ್ತನ ಪ್ರವಾದಿ ಗಳಲ್ಲಿ ನಾನೊಬ್ಬನೇ ಉಳಿದಿದ್ದೇನೆ; ಆದರೆ ಬಾಳನ ಪ್ರವಾದಿಗಳು ನಾನೂರಐವತ್ತು ಮಂದಿ ಇದ್ದಾರೆ.

23ಈಗ ಎರಡು ಹೋರಿಗಳನ್ನು ಅವರು ನಮಗೆ ಕೊಡಲಿ; ಒಂದು ಹೋರಿಯನ್ನು ಅವರು ಆದು ಕೊಂಡು ಅದನ್ನು ತುಂಡು ತುಂಡಾಗಿ ಕಡಿದು ಬೆಂಕಿ ಹಾಕದೆ ಕಟ್ಟಿಗೆಗಳ ಮೇಲೆ ಇಡಲಿ. ನಾನು ಇನ್ನೊಂದು ಹೋರಿಯನ್ನು ಹಾಗೆಯೇ ಮಾಡಿ ಬೆಂಕಿ ಹಾಕದೆ ಕಟ್ಟಿಗೆಗಳ ಮೇಲೆ ಇಡುವೆನು.

24ಆಗ ನೀವು ನಿಮ್ಮ ದೇವರುಗಳ ಹೆಸರನ್ನು ಕರೆಯಿರಿ; ನಾನು ಕರ್ತನ ಹೆಸರನ್ನು ಹೇಳಿ ಪ್ರಾರ್ಥಿಸುವೆನು. ಆಗ ಬೆಂಕಿಯಿಂದ ಪ್ರತ್ಯುತ್ತರ ಕೊಡುವ ದೇವರು ತಾನೇ ದೇವರಾಗಿ ರುವನು ಅಂದನು.

25ಅದಕ್ಕೆ ಜನರೆಲ್ಲರು ಪ್ರತ್ಯುತ್ತರ ವಾಗಿ--ಈ ಮಾತು ಒಳ್ಳೇದು ಅಂದರು. ಆಗ ಎಲೀ ಯನು ಬಾಳನ ಪ್ರವಾದಿಗಳಿಗೆ--ನೀವು ಅನೇಕರಾಗಿ ರುವದರಿಂದ ಒಂದು ಹೋರಿಯನ್ನು ಆದುಕೊಂಡು ಅದನ್ನು ಮೊದಲು ಸಿದ್ಧಮಾಡಿ ನಿಮ್ಮ ದೇವರುಗಳ ಹೆಸರನ್ನು ಕರೆಯಿರಿ; ಆದರೆ ಬೆಂಕಿಯನ್ನು ಹಾಕದೆ ಇರ್ರಿ ಅಂದನು.

26ಅವರು ತಮಗೆ ಕೊಡಲ್ಪಟ್ಟ ಹೋರಿ ಯನ್ನು ತೆಗೆದುಕೊಂಡು ಸಿದ್ಧಮಾಡಿ--ಓ ಬಾಳನೇ, ನಮ್ಮನ್ನು ಕೇಳೆಂದು ಉದಯದಿಂದ ಮಧ್ಯಾಹ್ನದ ವರೆಗೂ ಬಾಳನ ಹೆಸರನ್ನು ಕರೆಯುತ್ತಿದ್ದರು. ಆದರೆ ಒಂದು ಶಬ್ದವಾಗಲಿ ಪ್ರತ್ಯುತ್ತರ ಕೊಡುವವನಾಗಲಿ ಇರಲಿಲ್ಲ. ಅವರು ಮಾಡಿದ ಬಲಿಪೀಠದ ಹತ್ತಿರ ಕುಣಿದಾಡಿದರು.

೧ ಅರಸುಗಳು 18 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी