ಯಾಕಂದರೆ ಯೇಸುವಿನ ಮೂಲಕ ಸತ್ತವರಿಗೆ ಪುನರುತ್ಥಾನವಾಗುವದೆಂದು ಅಪೊಸ್ತಲರು ಜನರಿಗೆ ಬೋಧಿಸಿ ಕಲಿಸುತ್ತಿದ್ದದರಿಂದ ಅವರು ಸಂತಾಪಪಟ್ಟಿದ್ದರು.
1ಅವರು ಜನರೊಂದಿಗೆ ಮಾತನಾಡು ತ್ತಿದ್ದಾಗ ಯಾಜಕರೂ ದೇವಾಲಯದ ಅಧಿಪತಿಯೂ ಸದ್ದುಕಾಯರೂ ಅವರಿಗೆ ವಿರೋಧ ವಾಗಿ ಬಂದರು;
2ಯಾಕಂದರೆ ಯೇಸುವಿನ ಮೂಲಕ ಸತ್ತವರಿಗೆ ಪುನರುತ್ಥಾನವಾಗುವದೆಂದು ಅಪೊಸ್ತಲರು ಜನರಿಗೆ ಬೋಧಿಸಿ ಕಲಿಸುತ್ತಿದ್ದದರಿಂದ ಅವರು ಸಂತಾಪಪಟ್ಟಿದ್ದರು.
3ಇದಲ್ಲದೆ ಅವರನ್ನು ಹಿಡಿದು ಮರುದಿನದ ವರೆಗೆ ಕಾವಲಲ್ಲಿಟ್ಟರು; ಯಾಕಂದರೆ ಆಗ ಸಾಯಂಕಾಲವಾಗಿತ್ತು.
4ಆದಾಗ್ಯೂ ವಾಕ್ಯವನ್ನು ಕೇಳಿದವರಲ್ಲಿ ಅನೇಕರು ನಂಬಿದರು; ಗಂಡಸರ ಸಂಖ್ಯೆ ಸುಮಾರು ಐದು ಸಾವಿರವಾಗಿತ್ತು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ