ಯೆಹೆಜ್ಕೇಲನು 13:17

ಇದೇ ರೀತಿ ಮನುಷ್ಯಪುತ್ರನೇ, ತಮ್ಮ ಹೃದಯ ದೊಳಗಿಂದ ಪ್ರವಾದಿಸುವ ನಿನ್ನ ಜನರ ಕುಮಾರ್ತೆ ಯರಿಗೆ ವಿರೋಧವಾಗಿ ನಿನ್ನ ಮುಖವನ್ನು ಮಾಡಿ, ನೀನು ಅವರಿಗೆ ಪ್ರವಾದಿಸಿ ಹೀಗೆ ಹೇಳು ಎಂದು ದೇವರಾದ ಕರ್ತನು ಹೇಳುತ್ತಾನೆ--

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 13

15ಹೀಗೆ ನಾನು ಗೋಡೆಯಲ್ಲಿಯೂ ಅದಕ್ಕೆ ಸುಣ್ಣ ಬಳಿದವರಲ್ಲಿಯೂ ರೋಷವನ್ನು ತೀರಿಸಿ ಕೊಂಡು ಇನ್ನು ಗೋಡೆಯಾದರೂ ಅದಕ್ಕೆ ಸುಣ್ಣ ಹಚ್ಚಿದವರಾದರೂ ಇಲ್ಲವೆಂದು

16ಯೆರೂಸಲೇಮಿನ ವಿಷಯ ಪ್ರವಾದಿಸಿ ಸಮಾಧಾನವಿಲ್ಲದಿರುವಾಗ ಅದಕ್ಕೆ ಸಮಾಧಾನದ ದರ್ಶನವನ್ನು ಕಂಡ ಇಸ್ರಾಯೇಲಿನ ಪ್ರವಾದಿಗಳು ನಿಮಗೆ ಇಲ್ಲವೆಂದು ದೇವರಾದ ಕರ್ತನು ಹೇಳುತ್ತಾನೆ.

17ಇದೇ ರೀತಿ ಮನುಷ್ಯಪುತ್ರನೇ, ತಮ್ಮ ಹೃದಯ ದೊಳಗಿಂದ ಪ್ರವಾದಿಸುವ ನಿನ್ನ ಜನರ ಕುಮಾರ್ತೆ ಯರಿಗೆ ವಿರೋಧವಾಗಿ ನಿನ್ನ ಮುಖವನ್ನು ಮಾಡಿ, ನೀನು ಅವರಿಗೆ ಪ್ರವಾದಿಸಿ ಹೀಗೆ ಹೇಳು ಎಂದು ದೇವರಾದ ಕರ್ತನು ಹೇಳುತ್ತಾನೆ--

18ಪ್ರಾಣಗಳನ್ನು ಬೇಟೆಯಾಡಬೇಕೆಂದು ಎಲ್ಲರ ಮೊಣಕೈಗಳಿಗೆ ದಿಂಡು ಗಳನ್ನು ಹೊಲಿದು ಪ್ರತಿಯೊಂದು ಎತ್ತರದ ತಲೆಗಳಿಗೆ ವಸ್ತ್ರಗಳನ್ನು ಕಟ್ಟುವ ಕುಮಾರ್ತೆಯರಿಗೆ ಅಯ್ಯೋ! ನನ್ನ ಜನರ ಪ್ರಾಣಗಳನ್ನು ಬೇಟೆಯಾಡುವಿರೋ? ನಿಮ್ಮ ಬಳಿಗೆ ಬರುವ ಪ್ರಾಣಗಳನ್ನು ಬದುಕಿಸುವಿರೋ?

19ಸುಳ್ಳಿಗೆ ಕಿವಿಗೊಡುವ ನನ್ನ ಜನರಿಗೆ ಸುಳ್ಳು ಹೇಳಿ, ಸಾಯದಿರುವವರನ್ನು ಸಾಯಿಸಿ, ಸಾಯುವವರನ್ನು ಬದುಕಿಸಿ, ಒಂದು ಹಿಡಿ ಬಾರ್ಲಿಗೂ ತುಂಡು ರೊಟ್ಟಿಗೂ ನನ್ನನ್ನು ನನ್ನ ಜನರೊಳಗೆ ಅಪವಿತ್ರಪಡಿಸುವಿರೋ?

ಯೆಹೆಜ್ಕೇಲನು 13 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी