ವಿಮೋಚನಕಾಂಡ 15:15

ಆಗ ಎದೋಮಿನ ಪ್ರಭುಗಳು ದಿಗ್ಭ್ರಮೆಗೊಳ್ಳು ವರು; ಮೋವಾಬಿನ ಬಲಿಷ್ಠರನ್ನು ಕಂಪನವು ಹಿಡಿಯು ವದು. ಕಾನಾನಿನ ನಿವಾಸಿಗಳೆಲ್ಲಾ ಕರಗಿ ಹೋಗುವರು.

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 15

13ನೀನು ವಿಮೋಚಿ ಸಿದ ಜನರನ್ನು ಕರುಣೆಯಿಂದ ನಡಿಸಿದಿ; ನೀನು ಅವ ರನ್ನು ನಿನ್ನ ಬಲದಿಂದ ನಿನ್ನ ಪರಿಶುದ್ಧ ನಿವಾಸಕ್ಕೆ ನಡಿಸಿದಿ.

14ಜನರು ಇದನ್ನು ಕೇಳಿ ಭಯಪಡುವರು; ದುಃಖವು ಫಿಲಿಷ್ಟಿಯದಲ್ಲಿ ವಾಸಿಸುವವರನ್ನು ಹಿಡಿಯುವದು.

15ಆಗ ಎದೋಮಿನ ಪ್ರಭುಗಳು ದಿಗ್ಭ್ರಮೆಗೊಳ್ಳು ವರು; ಮೋವಾಬಿನ ಬಲಿಷ್ಠರನ್ನು ಕಂಪನವು ಹಿಡಿಯು ವದು. ಕಾನಾನಿನ ನಿವಾಸಿಗಳೆಲ್ಲಾ ಕರಗಿ ಹೋಗುವರು.

16ಭಯವೂ ಹೆದರಿಕೆಯೂ ಅವರ ಮೇಲೆ ಬೀಳು ವದು; ನಿನ್ನ ಜನರು ದಾಟಿ ಹೋಗುವ ವರೆಗೆ ಓ ಕರ್ತನೇ, ನೀನು ಕೊಂಡುಕೊಂಡ ಜನರು ದಾಟಿ ಹೋಗುವ ವರೆಗೆ ನಿನ್ನ ಬಾಹುವಿನ ದೊಡ್ಡಸ್ತಿಕೆಯಿಂದ ಅವರು ಕಲ್ಲಿನಂತೆ ಸ್ತಬ್ಧರಾಗುವರು.

17ನೀನು ಅವರನ್ನು ಒಳಗೆ ಬರಮಾಡಿ ಓ ಕರ್ತನೇ, ನಿನ್ನ ಕೈಗಳು ಸ್ಥಾಪಿಸಿದ ಪರಿಶುದ್ಧ ನಿವಾಸದಲ್ಲಿಯೂ (ಓ ಕರ್ತನೇ,) ನೀನು ವಾಸಿಸುವದಕ್ಕೆ ಮಾಡಿಕೊಂಡಿರುವ ನಿನ್ನ ಸ್ವಾಸ್ಥ್ಯದ ಪರ್ವತದಲ್ಲಿಯೂ ಅವರನ್ನು ಸ್ಥಾಪಿಸುವಿ.

ವಿಮೋಚನಕಾಂಡ 15 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी