ಅರಣ್ಯಕಾಂಡ 14:27

ಈ ಕೆಟ್ಟ ಸಭೆಯು ನನಗೆ ವಿರೋಧವಾಗಿ ಗುಣುಗುಟ್ಟುವದನ್ನು ನಾನು ಎಷ್ಟುಕಾಲ ಸಹಿಸಲಿ? ಇಸ್ರಾಯೇಲ್‌ ಮಕ್ಕಳು ನನಗೆ ವಿರೋಧವಾಗಿ ಗುಣುಗುಟ್ಟಿದ್ದನ್ನು ನಾನು ಕೇಳಿದ್ದೇನೆ.

ಸಂದರ್ಭದೊಂದಿಗೆ ಓದಿ · ಅರಣ್ಯಕಾಂಡ 14

25(ಆಗ ಅಮಾಲೇ ಕ್ಯರೂ ಕಾನಾನ್ಯರೂ ತಗ್ಗಿನಲ್ಲಿ ವಾಸಮಾಡುತ್ತಿದ್ದರು.) ನಾಳೆ ನೀವು ತಿರುಗಿಕೊಂಡು ಕೆಂಪು ಸಮುದ್ರದ ಮಾರ್ಗವಾಗಿ ಅರಣ್ಯಕ್ಕೆ ಹೊರಡಿರಿ ಎಂದು ಹೇಳಿದನು.

26ಕರ್ತನು ಮಾತನಾಡಿ ಮೋಶೆಗೂ ಆರೋನ ನಿಗೂ--

27ಈ ಕೆಟ್ಟ ಸಭೆಯು ನನಗೆ ವಿರೋಧವಾಗಿ ಗುಣುಗುಟ್ಟುವದನ್ನು ನಾನು ಎಷ್ಟುಕಾಲ ಸಹಿಸಲಿ? ಇಸ್ರಾಯೇಲ್‌ ಮಕ್ಕಳು ನನಗೆ ವಿರೋಧವಾಗಿ ಗುಣುಗುಟ್ಟಿದ್ದನ್ನು ನಾನು ಕೇಳಿದ್ದೇನೆ.

28ಆದದರಿಂದ ನೀನು ಅವರಿಗೆ--ನನ್ನ ಜೀವದಾಣೆ, ನೀವು ನನ್ನ ಕಿವಿಗಳು ಕೇಳುವಂತೆ ಮಾತನಾಡಿದ ಪ್ರಕಾರವೇ ನಿಮಗೆ ಮಾಡುವೆನು ಎಂದು ಕರ್ತನು ಹೇಳುತ್ತಾನೆ.

29ಈ ಅರಣ್ಯದಲ್ಲಿ ನಿಮ್ಮ ಹೆಣಗಳು ಬೀಳುವವು. ನನಗೆ ವಿರೋಧವಾಗಿ ಗುಣುಗುಟ್ಟಿದವರೆಲ್ಲರೂ ನಿಮ್ಮ ಪೂರ್ಣ ಸಂಖ್ಯೆಯ ಪ್ರಕಾರ ಎಣಿಸಿದ ಇಪ್ಪತ್ತು ವರುಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ಆದ ನೀವೇ.

ಅರಣ್ಯಕಾಂಡ 14 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी