ಮಲಾಕಿಯ 3:7

ನಿಮ್ಮ ತಂದೆಗಳ ದಿವಸಗಳಿಂದಲೇ ನನ್ನ ನಿಯಮ ಗಳನ್ನು ಬಿಟ್ಟುಹೋಗಿದ್ದೀರಿ. ಅವುಗಳನ್ನು ಕೈಕೊಳ್ಳಲಿಲ್ಲ; ನನ್ನ ಬಳಿಗೆ ತಿರುಗಿಕೊಳ್ಳಿರಿ; ಆಗ ನಾನು ನಿಮ್ಮ ಬಳಿಗೆ ತಿರುಗಿಕೊಳ್ಳುವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ; ಆದರೆ ನೀವು--ಯಾವದರಲ್ಲಿ ತಿರುಗಿಕೊಳ್ಳೋಣ ಎಂದು ಹೇಳುತ್ತೀರಿ.

ಸಂದರ್ಭದೊಂದಿಗೆ ಓದಿ · ಮಲಾಕಿಯ 3

5ನ್ಯಾಯಕ್ಕೋಸ್ಕರ ನಿಮ್ಮನ್ನು ನಾನು ಸವಿಾಪಿ ಸುತ್ತೇನೆ; ಆಗ ಕಣಿಹೇಳುವವರಿಗೂ ವ್ಯಭಿಚಾರಿ ಗಳಿಗೂ ಸುಳ್ಳು ಪ್ರಮಾಣಮಾಡುವವರಿಗೂ ಸಂಬಳ ದಲ್ಲಿ ಕೂಲಿಯವನಿಗೂ ವಿಧವೆಗೂ ದಿಕ್ಕಿಲ್ಲದವನಿಗೂ ಬಲಾತ್ಕಾರ ಮಾಡುವವರಿಗೂ ಅನ್ಯನ ನ್ಯಾಯವನ್ನು ತಿರಿಗಿಸಿ ಬಿಡುವವರಿಗೂ ನನಗೆ ಭಯಪಡದವರಿಗೂ ವಿರೋಧವಾಗಿ ಶೀಘ್ರವಾದ ಸಾಕ್ಷಿಗಾರನಾಗಿರು ವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.

6ನಾನು ಕರ್ತನು, ನಾನು ಬದಲಾಗುವದಿಲ್ಲ; ಆದದರಿಂದ ಓ ಯಾಕೋಬಿನ ಕುಮಾರರೇ, ನೀವು ನಾಶವಾಗಲಿಲ್ಲ.

7ನಿಮ್ಮ ತಂದೆಗಳ ದಿವಸಗಳಿಂದಲೇ ನನ್ನ ನಿಯಮ ಗಳನ್ನು ಬಿಟ್ಟುಹೋಗಿದ್ದೀರಿ. ಅವುಗಳನ್ನು ಕೈಕೊಳ್ಳಲಿಲ್ಲ; ನನ್ನ ಬಳಿಗೆ ತಿರುಗಿಕೊಳ್ಳಿರಿ; ಆಗ ನಾನು ನಿಮ್ಮ ಬಳಿಗೆ ತಿರುಗಿಕೊಳ್ಳುವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ; ಆದರೆ ನೀವು--ಯಾವದರಲ್ಲಿ ತಿರುಗಿಕೊಳ್ಳೋಣ ಎಂದು ಹೇಳುತ್ತೀರಿ.

8ಮನುಷ್ಯನು ದೇವರದನ್ನು ಕಳ್ಳತನ ಮಾಡುವನೋ? ಆದರೆ ನೀವು ನನ್ನದನ್ನು ಕಳ್ಳತನ ಮಾಡಿದ್ದೀರಿ; ಆದರೆ ನೀವು--ಯಾವದರಲ್ಲಿ ನಿನ್ನದನ್ನು, ಕಳ್ಳತನ ಮಾಡಿದ್ದೇವೆಂದು ಅನ್ನುತ್ತೀರಿ? ದಶಮಭಾಗ ಮತ್ತು ಅರ್ಪಣೆಗಳನ್ನೇ.

9ಇದರ ಮೂಲಕ ಶಪಿಸಲ್ಪಟ್ಟಿ; ನೀವು, ಹೌದು, ಈ ಸಮಸ್ತ ಜನಾಂಗವೇ ನನ್ನದನ್ನು ಕಳ್ಳತನ ಮಾಡಿದ್ದೀರಿ.

ಮಲಾಕಿಯ 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी