೨ ಅರಸುಗಳು 17:24

ಅಶ್ಶೂರಿನ ಅರಸನು ಬಾಬೆಲಿನಿಂದಲೂ ಕೂತಾ ಅವ್ವಾ ಹಮಾತ್‌ ಸೆಫರ್ವಯಿಮಿನಿಂದಲೂ ಜನರನ್ನು ಬರಮಾಡಿ ಅವರನ್ನು ಇಸ್ರಾಯೇಲ್‌ ಮಕ್ಕಳಿಗೆ ಬದ ಲಾಗಿ ಸಮಾರ್ಯದ ಪಟ್ಟಣಗಳಲ್ಲಿ ಇರಿಸಿದನು. ಇವರು ಸಮಾರ್ಯವನ್ನು ಸ್ವತಂತ್ರಿಸಿಕೊಂಡು ಅವರ ಪಟ್ಟಣಗಳಲ್ಲಿ ವಾಸಿಸಿದರು.

ಸಂದರ್ಭದೊಂದಿಗೆ ಓದಿ · ೨ ಅರಸುಗಳು 17

22ಕರ್ತನು ಪ್ರವಾ ದಿಗಳಾದ ತನ್ನ ಸೇವಕರ ಮುಖಾಂತರ ಹೇಳಿದ ಹಾಗೆ ಅವನು ಇಸ್ರಾಯೇಲನ್ನು ತನ್ನ ಸಮ್ಮುಖದಿಂದ ತೆಗೆದು ಹಾಕುವ ವರೆಗೆ ಇಸ್ರಾಯೇಲಿನ ಮಕ್ಕಳು ಯಾರೊ ಬ್ಬಾಮನು ಮಾಡಿದ ಎಲ್ಲಾ ಪಾಪಗಳಲ್ಲಿ ನಡೆದರು; ಅವುಗಳನ್ನು ತೊರೆದು ಬಿಡಲಿಲ್ಲ.

23ಹೀಗೆಯೇ ಇಸ್ರಾ ಯೇಲಿನವರು ಇಂದಿನ ವರೆಗೂ ತಮ್ಮ ದೇಶದಿಂದ ಅಶ್ಶೂರಿಗೆ ಸೆರೆಯಾಗಿ ಒಯ್ಯಲ್ಪಟ್ಟರು.

24ಅಶ್ಶೂರಿನ ಅರಸನು ಬಾಬೆಲಿನಿಂದಲೂ ಕೂತಾ ಅವ್ವಾ ಹಮಾತ್‌ ಸೆಫರ್ವಯಿಮಿನಿಂದಲೂ ಜನರನ್ನು ಬರಮಾಡಿ ಅವರನ್ನು ಇಸ್ರಾಯೇಲ್‌ ಮಕ್ಕಳಿಗೆ ಬದ ಲಾಗಿ ಸಮಾರ್ಯದ ಪಟ್ಟಣಗಳಲ್ಲಿ ಇರಿಸಿದನು. ಇವರು ಸಮಾರ್ಯವನ್ನು ಸ್ವತಂತ್ರಿಸಿಕೊಂಡು ಅವರ ಪಟ್ಟಣಗಳಲ್ಲಿ ವಾಸಿಸಿದರು.

25ಆದರೆ ಅವರು ಅಲ್ಲಿ ವಾಸಿಸಲು ಆರಂಭಿಸಿದಾಗ ಅವರು ಕರ್ತನಿಗೆ ಭಯ ಪಡದಿದದ್ದರಿಂದ ಕರ್ತನು ಅವರ ಮಧ್ಯದಲ್ಲಿ ಸಿಂಹ ಗಳನ್ನು ಕಳುಹಿಸಿದನು. ಅವು ಅವರಲ್ಲಿ ಕೆಲವರನ್ನು ಕೊಂದುಹಾಕಿದವು.

26ಆದಕಾರಣ ಅವರು ಅಶ್ಶೂರಿನ ಅರಸನಿಗೆ--ನೀನು ಸೇರಿಸಿ ಸಮಾರ್ಯದ ಪಟ್ಟಣಗಳಲ್ಲಿ ಇರಿಸಿದ ಜನಾಂಗಗಳು ಆ ದೇಶದ ದೇವರ ಕ್ರಮವನ್ನು ತಿಳಿಯದೆ ಇದ್ದಾರೆ. ಅವರು ಆ ದೇಶದ ದೇವರ ಕ್ರಮವನ್ನು ತಿಳಿಯದೆ ಇದ್ದದರಿಂದ ಆತನು ಅವರ ಮಧ್ಯದಲ್ಲಿ ಸಿಂಹಗಳನ್ನು ಕಳುಹಿಸಿದ್ದಾನೆ; ಇಗೋ, ಅವು ಅವರನ್ನು ಕೊಂದುಹಾಕುತ್ತವೆ ಅಂದರು.

೨ ಅರಸುಗಳು 17 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी