ಅವರು ಆ ನಕ್ಷತ್ರವನ್ನು ಕಂಡು ಅತ್ಯಧಿಕವಾದ ಆನಂದದಿಂದ ಸಂತೋಷಪಟ್ಟರು.
8ಅವರನ್ನು ಬೇತ್ಲೆಹೇಮಿಗೆ ಕಳುಹಿ ಸುವಾಗ--ನೀವು ಹೋಗಿ ಆ ಶಿಶುವಿನ ವಿಷಯದಲ್ಲಿ ಪರಿಷ್ಕಾರವಾಗಿ ಹುಡುಕಿ ಆತನನ್ನು ಕಂಡುಕೊಂಡ ಮೇಲೆ ತಿರಿಗಿ ಬಂದು ನನಗೆ ತಿಳಿಸಿರಿ; ಆಗ ನಾನು ಸಹ ಬಂದು ಆತನನ್ನು ಆರಾಧಿಸುವೆನು ಅಂದನು.
9ಅವರು ಅರಸನ ಮಾತನ್ನು ಕೇಳಿ ಹೊರಟಾಗ ಇಗೋ, ಮೂಡಲದಲ್ಲಿ ಅವರು ಕಂಡ ನಕ್ಷತ್ರವು ಶಿಶುವು ಇದ್ದ ಸ್ಥಳದ ಮೇಲೆ ಬಂದು ನಿಲ್ಲುವ ತನಕ ಅವರ ಮುಂದೆ ಹೋಯಿತು.
10ಅವರು ಆ ನಕ್ಷತ್ರವನ್ನು ಕಂಡು ಅತ್ಯಧಿಕವಾದ ಆನಂದದಿಂದ ಸಂತೋಷಪಟ್ಟರು.
11ಅವರು ಮನೆಯೊಳಕ್ಕೆ ಬಂದಾಗ ಆ ಶಿಶುವನ್ನು ಆತನ ತಾಯಿಯಾದ ಮರಿಯಳೊಂದಿಗೆ ಕಂಡುಕೊಂಡು ಸಾಷ್ಟಾಂಗವೆರಗಿ ಆತನನ್ನು ಆರಾಧಿಸಿದರು; ತರುವಾಯ ತಮ್ಮ ಬೊಕ್ಕಸಗಳನ್ನು ತೆರೆದು ಚಿನ್ನ ಧೂಪ ರಕ್ತಬೋಳಗಳನ್ನು ಆತನಿಗೆ ಕಾಣಿಕೆಯಾಗಿ ಅರ್ಪಿಸಿದರು.
12ಆಮೇಲೆ ಅವರು ಹೆರೋದನ ಬಳಿಗೆ ಹಿಂತಿರುಗಬಾರದೆಂದು ಕನಸಿನಲ್ಲಿ ದೇವರಿಂದ ಎಚ್ಚರಿಸಲ್ಪಟ್ಟು ಬೇರೊಂದು ದಾರಿಯಿಂದ ತಮ್ಮ ಸ್ವದೇಶಕ್ಕೆ ಹೊರಟುಹೋದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ