ಯೆರೆಮಿಯ 50:23

ಎಲ್ಲಾ ಭೂಮಿಯ ಸುತ್ತಿಗೆಯೂ ಹೇಗೆ ತುಂಡಾಗಿ ಮುರಿಯಲ್ಪಟ್ಟಿತು; ಬಾಬೆಲ್‌ ಹೇಗೆ ಜನಾಂಗಗಳೊಳಗೆ ಹಾಳಾಯಿತು!

ಸಂದರ್ಭದೊಂದಿಗೆ ಓದಿ · ಯೆರೆಮಿಯ 50

21ಮೆರಾಥಯಿಮ್‌ ದೇಶಕ್ಕೂ ಪೆಕೋದಿನ ನಿವಾಸಿ ಗಳಿಗೂ ವಿರೋಧವಾಗಿ ಏರಿಹೋಗು; ಅವರನ್ನು ಹಿಂದಟ್ಟಿ ಕೆಡಿಸಿಬಿಟ್ಟು ಸಂಪೂರ್ಣ ನಾಶಮಾಡು, ನಾನು ನಿನಗೆ ಆಜ್ಞಾಪಿಸಿದ್ದೆಲಾದರ ಪ್ರಕಾರ ಮಾಡು ಎಂದು ಕರ್ತನು ಅನ್ನುತ್ತಾನೆ.

22ಯುದ್ಧದ ಶಬ್ದವೂ ದೊಡ್ಡ ನಾಶನವೂ ದೇಶದಲ್ಲಿ ಇರುವದು.

23ಎಲ್ಲಾ ಭೂಮಿಯ ಸುತ್ತಿಗೆಯೂ ಹೇಗೆ ತುಂಡಾಗಿ ಮುರಿಯಲ್ಪಟ್ಟಿತು; ಬಾಬೆಲ್‌ ಹೇಗೆ ಜನಾಂಗಗಳೊಳಗೆ ಹಾಳಾಯಿತು!

24ನಾನು ಬೋನನ್ನು ಇಟ್ಟೆನು; ಹೌದು, ಬಾಬೆಲೇ ನೀನು ಹಿಡಿಯಲ್ಪಟ್ಟಿದ್ದೀ; ಆದರೆ ನಿನಗೆ ತಿಳಿಯದಿತ್ತು; ನೀನು ಕರ್ತನಿಗೆ ವಿರೋಧವಾಗಿ ಜಗಳವಾಡಿದ್ದ ರಿಂದಲೇ ಸಿಕ್ಕಿದ್ದೀ; ವಶಮಾಡಲ್ಪಟ್ಟಿದ್ದೀ;

25ಕರ್ತನು ತನ್ನ ಆಯುಧ ಶಾಲೆಯನ್ನು ತೆರೆದು, ರೋಷದ ಆಯುಧಗಳನ್ನು ಹೊರಗೆ ತಂದಿದ್ದಾನೆ; ಕಸ್ದೀಯರ ದೇಶದಲ್ಲಿ ಸೈನ್ಯಗಳ ಕರ್ತನಾದ ದೇವರಿಗೆ ನಿರ್ವಹಿಸ ಬೇಕಾದ ಕಾರ್ಯವುಂಟು.

ಯೆರೆಮಿಯ 50 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी